ಬೆಂಗಳೂರು
ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಚೊಕ್ಕಸಂದ್ರದ ಮೋನಿಕಾ(24) ಮೃತ ಮಹಿಳೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಮಂಜುನಾಥ್ ಎಂಬಾತನೊಂದಿಗೆ ವಿವಾಹವಾಗಿದ್ದ ಮೋನಿಕಾಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ.
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ದಂಪತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಕಳೆದ ಒಂದು ವರ್ಷದಿಂದ ಪತಿ ಕಿರುಕುಳ ನೀಡುತ್ತಿದ್ದ ಆತನೇ ಕೊಲೆ ಮಾಡಿದ್ದಾನೆಂದು ಮೋನಿಕಾ ತಂದೆ ಸೋಮಣ್ಣ ಆರೋಪಿಸಿ ದೂರು ನೀಡಿದ್ದಾರೆ ನಂದಗುಡಿ ಪೆÇಲೀಸರು ಪ್ರಕರಣ ದಾಖಲಿಸಿ ಪತಿಯನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/suicide_3068456_835x547-m-1.gif)