ಜನವರಿ 7 ಮತ್ತು 8 ರಂದು ನಗರದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ

ಹಾವೇರಿ
 
   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ  ಮಹಿಳಾ ಸಾಂಸ್ಕೃತಿಕ ಉತ್ಸವ(ಮಹಿಳೆಯರ ರಂಗೋಲಿ ಸ್ಪರ್ಧೆ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು) ಜನವರಿ 7 ಮತ್ತು 8 ರಂದು ಎರಡು ದಿವಸ ನಗರದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
   ಜನವರಿ 7 ರಂದು ಸಂಜೆ 5 ಗಂಟೆಗೆ ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಅವರು ಘನ ಉಪಸ್ಥಿತಿಯಲ್ಲಿ ಗೃಹ, ಸಹಕಾರ  ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರದಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ಶಾಸಕರಾದ ನೆಹರು ಓಲೇಕಾರ ಅಧ್ಯಕ್ಷತೆ ವಹಿಸುವರು. 
   ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಯು.ಬಿ. ಬಣಕಾರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್.ಕೆ.ಕರಿಯಣ್ಣನವರ, ಲೋಕಸಭಾ ಸದಸ್ಯರಾದ ಶಿವಕುಮಾರ ಉದಾಸಿ, ವಿಧಾನ ಪರಿಷತ್‍ನ ಶಾಸಕರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್.ವಿ.ಸಂಕನೂರು, ಪ್ರದೀಪ ಶೆಟ್ಟರ್, ವಿಧಾನಸಭೆ ಶಾಸಕರಾದ ಸಿ.ಎಂ.ಉದಾಸಿ, ಬಿ.ಸಿ.ಪಾಟೀಲ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರು(ಪೂಜಾರ), ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಗಿರಿಜಮ್ಮ ಬ್ಯಾಲದಹಳ್ಳಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕಮಲವ್ವ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ ಸಂಗೂರು ಅವರು ಪಾಲ್ಗೊಳ್ಳಲಿದ್ದಾರೆ.  ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಶಂಕರ ಅರ್ಕಸಾಲಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link