ಬೆಂಗಳೂರು
ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಒಂಟಿಯಾಗಿದ್ದ ಮಹಿಳೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿ ಪರಾರಿಯಾಗಿರುವ ದುರ್ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.
ದೊಡ್ಡಬೆಳವಂಗಲದ ಚೆನ್ನಮ್ಮ (65)ಎಂದು ಕೊಲೆಯಾದ ಮಹಿಳೆಯನ್ನು ಗುರುತಿಸಲಾಗಿದೆ.ಚೆನ್ನಮ್ಮ ಅವರ ಪತಿ ಮೃತಪಟ್ಟು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿದ್ದರಿಂದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು.ಆರ್ಥಿಕವಾಗಿ ಸ್ಥಿತಿವಂತರಾಗಿದ್ದ ಚೆನ್ನಮ್ಮ ಅವರಿಗೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಎರಡು ಮನೆ ಇದ್ದು, ಒಂದರಲ್ಲಿ ತಾವು ವಾಸವಾಗಿದ್ದರು. ಮತ್ತೊಂದು ಮನೆಯನ್ನು ಬಾಡಿಗೆ ಕೊಟ್ಟಿದ್ದರು.
ಇತ್ತೀಚೆಗೆ ಮನೆ ಖಾಲಿಯಾಗಿದ್ದು, ದುಷ್ಕರ್ಮಿಗಳು ಬಾಡಿಗೆ ಕೇಳುವ ನೆಪದಲ್ಲಿ ಬಂದು ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿರುವ ದೊಡ್ಡಬೆಳವಂಗಲ ಪೆÇಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
