ನೀರಿಗಾಗಿ ಮಹಿಳೆಯರ ಪ್ರತಿಭಟನೆ

ಹರಪನಹಳ್ಳಿ

    ಕುಡಿಯುವ ನೀರಿಗಾಗಿ ಮಹಿಳೆಯರು ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕಂಚಿಕೇರಿಯಲ್ಲಿ ಶನಿವಾರ ಜರುಗಿದೆ.

    ಗ್ರಾಮದ 1ನೇ ವಾರ್ಡಿನ ಪರಿಶಿಷ್ಟರು, ಹಿಂದುಳಿದ ವರ್ಗದವರ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

    ಪಂಚಾಯ್ತಿ ಅಭಿವೃದ್ದಿ ಅದಿಕಾರಿ, ಹಾಗೂ ಪಂಚಾಯ್ತಿ ಸದಸ್ಯರು ಉದ್ಯೋಗ ಖಾತ್ರಿ ಕಾಮಗಾರಿಗಳಲ್ಲಿ ತಲ್ಲೀನರಾಗಿದ್ದು, ನೀರಿನ ಸಮಸ್ಯೆ ಕೇಳುವವರಿಲ್ಲ ಎಂದು ಅವರು ಆರೋಪಿಸಿದರು. ಅನೇಕ ವರ್ಷಗಳಿಂದ ಈ ಸಮಸ್ಯೆ ಇದ್ದು, ದೂರ ದೂರ ಹೋಗಿ ನೀರನ್ನು ಅದರಲ್ಲೂ ರಾತ್ರಿ ಹೊತ್ತಿನಲ್ಲಿ ತರಬೇಕಾದ ಪರಿಸ್ಥಿತಿ ಇದೆ ಎಂದು ಅವರು ಅಳಲು ತೋಡಿಕೊಂಡರು.

   ಈಗಾಗಲೇ ಅನೇಕ ಬಾರಿ ಸಂಬಂಧ ಪಟ್ಟ ಎಲ್ಲರಿಗೂ ಈ ಕುರಿತು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ, ಹೀಗೆ ಮುಂದುವರೆದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

    ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ ಗ್ರಾ.ಪಂ ಅಧ್ಯಕ್ಷ ಕೆ.ಪಿ. ಬಸವರಾಜಪ್ಪ ಅವರು ನೀರಿನ ಸಮಸ್ಯೆ ಶೀಘ್ರ ಬಗೆಹರಿಸುವುದಾಗಿ ಹಾಗೂ ಸಮಸ್ಯೆ ಬಗೆಹರಿಯುವವರಿಗೂ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು.

    ಪ್ರತಿಭಟನೆಯಲ್ಲಿ ಬೋವಿ ರತ್ನಮ್ಮ, ಬೋವಿ ಸಂಜೀವಮ್ಮ, ಪಕ್ಕೀರಮ್ಮ, ಹೂವಕ್ಕ ಮಂಜಮ್ಮ, ಮಾಯಕ್ಕ, ಡಿ.ಜಿ.ಕೃಷ್ಣಪ್ಪ ಇತರರು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link