ಭಿನ್ನಮತ ತ್ಯಜಿಸಿ ಬಿಜೆಪಿ ಗೆಲುವಿಗೆ ಸಂಕಲ್ಪಮಾಡಿ : ರಘುಚಂದನ್

ಹೊಳಲ್ಕೆರೆ;

     ಕಾರ್ಯಕರ್ತರು ತಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿದ್ದರೂ ಅದನ್ನು ಬಿಟ್ಟು ಪಕ್ಷದ ಗೆಲುವಿಗೆ ಸಂಕಲ್ಪ ಮಾಡಬೇಕು. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಾಗಿದೆ ಎಂದು ಬಿಜೆಪಿ ಯುವ ಮುಖಂಡ ರಘುಚಂದನ್ ಕರೆ ನೀಡಿದರು
ಹೊಳಲ್ಕೆರೆಯ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು

       ಪಟ್ಟಣದ ಅಭಿವೃದ್ದಿಯ ದೃಷ್ಟಿಯಿಂದ ಈ ಚುನಾವಣಯನ್ನು ನಾವು ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯ ಹಾಗೂ ಮನಸ್ಥಾಪಗಳನ್ನು ಬಿಟ್ಟು ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೊಳಲ್ಕೆರೆ ಸೇರಿದಂತೆ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ರೀತಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿರೋ ಅದೇ ರೀತಿಯಲ್ಲಿ ಹೊಳಲ್ಕೆರೆಯ ಹದಿನಾರು ಸ್ಥಾನಗಳಲ್ಲಿ ಹನ್ನೆರಡಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷಕ್ಕೆ ಗೆಲುವು ತಂದುಕೊಡಬೇಕೆಂದು ಮನವಿ ಮಾಡಿದರು.ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ.ಭಾವುಟ ಹಾರಾಡಬೇಕಾದರೆ ಕಾರ್ಯಕರ್ತರು ತಳಮಟ್ಟದಿಂದ ಕೆಲಸ ಮಾಡುವಂತೆ ವಿನಂತಿಸಿದರು.

       ಸಭೆಯನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್ ಮಾತನಾಡಿ, ಪಟ್ಟಣ ಪಂಚಾಯಿತಿ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಬಿಜೆಪಿ.ಮನೆಗಳಿಗೆ ಕಾರ್ಯಕರ್ತರು ಭೇಟಿ ನೀಡಿ ಹೊಳಲ್ಕೆರೆಯ ಹದಿನಾರು ವಾರ್ಡ್‍ಗಳಲ್ಲಿ ಹದಿನಾಲ್ಕು ವಾರ್ಡ್‍ಗಳನ್ನು ಗೆದ್ದು ಬಿಜೆಪಿ.ಭಾವುಟ ಹಾರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

        ಪಾರ್ಲಿಮೆಂಟ್ ಚುನಾವಣೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಹೊಳಲ್ಕೆರೆ, ಚಿತ್ರದುರ್ಗ ಹೆಚ್ಚು ಮತದಾನವಾಗಲಿದೆ ಎಂದುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆಯಂತ ಮತದಾನವಾಗಿಲ್ಲ. ಸಿರಾದಲ್ಲಿ ಶೇ.74 ರಷ್ಟು ಮತದಾನವಾಗಿದೆ. ಹಿಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಶೇ.54 ರಷ್ಟು ಮತದಾನವಾಗಿತ್ತು. ಹೊಳಲ್ಕೆರೆ ಎರಡನೆ ಸ್ಥಾನದಲ್ಲಿದೆ. ಹೊಸದುರ್ಗ, ಮೊಳಕಾಲ್ಮುರು, ಚಳ್ಳಕೆರೆ 3, 4, 5 ನೇ ಸ್ಥಾನದಲ್ಲಿದೆ. ಎರಡನೆ ಹಿರಿಯೂರು, ಚಿತ್ರದುರ್ಗ 6, 7 ನೇ ಸ್ಥಾನದಲ್ಲಿದೆ. ಪಾವಗಡ ಎಂಟನೆ ಸ್ಥಾನದಲ್ಲಿದೆ.

       ನಿರೀಕ್ಷೆಗೆ ತಕ್ಕಂತೆ ಮತದಾನವಾಗಿಲ್ಲ. ಹೊಳಲ್ಕೆರೆಯಲ್ಲಿ ಮೈಮರೆತಿದ್ದೇವೆ. ಹಾಗಾಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ.ಅಧಿಕಾರ ಹಿಡಿಯಬೇಕಾದರೆ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಮೋದಿರವರ ಸಾಧನೆಗಳನ್ನು ತಿಳಿಸಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಿ ಎಂದು ಹೇಳಿದರು.

        ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಬಯಸುವವರು ತಮ್ಮ ತಮ್ಮ ವಾರ್ಡ್‍ಗಳಲ್ಲಿ ಮೊದಲು ಮತಗಳೆಷ್ಟಿವೆ. ಎಷ್ಟು ಮತಗಳು ಪಕ್ಷಕ್ಕೆ ಬೀಳಬಹುದು. ಎಷ್ಟು ಮತಗಳು ವಿರುದ್ದವಿದೆ ಎನ್ನುವುದನ್ನು ಮೊದಲು ತಿಳಿದುಕೊಂಡಿರಬೇಕು. ಪಕ್ಷದ ವರಿಷ್ಟರು ತೀರ್ಮಾನಿಸುವ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸುತ್ತೇವೆ. ಹಾಗಾಗಿ ಹೆಚ್ಚು ಜನಪರವಾಗಿರುವವರನ್ನು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುವುದೆಂದರು.

     ಹೊಳಲ್ಕೆರೆಯಲ್ಲಿ ಹದಿನಾರು ವಾರ್ಡ್, ಮೊಳಕಾಲ್ಮುರು, ಹಿರಿಯೂರು ತಾಲೂಕಿನಲ್ಲಿ ಬಿಜೆಪಿ.ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ ಎಂದರು.ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿಲ್ಲಾ ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಮಂಡಲ ಅಧ್ಯಕ್ಷ ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ನಲ್ಲಿಕಟ್ಟೆ ಜಗದೀಶ್, ಪಟ್ಟಣ ಪಂಚಾಯಿತಿ ಸದಸ್ಯ ರಮೇಶ್, ಚಂದ್ರನಾಯ್ಕ, ಅಶೋಕ್, ಗಿರೀಶ್, ವಿಕಾಸ್ ಸೇರಿದಂತೆ ಅಪಾರ ಕಾರ್ಯಕರ್ತರು, ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap