ಬಳ್ಳಾರಿ:
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು ಬೆಳಿಗ್ಗೆ ಬಳ್ಳಾರಿಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ ಸಭಾಂಗಣದಲ್ಲಿ ಗಿಡ ನೆಡುವ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು.
ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಲಕ್ಷ್ಮಣ್ ನಿಂಬರ್ಗಿ ಅವರು ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಈ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಬೇಕು ಹಾಗೂ ಜನರಲ್ಲಿ ಗಿಡ-ಮರಗಳ ಅವಶ್ಯಕತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸುತ್ತಾ ಸಂಸ್ಥೆಯ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಅಭಿನಂದಿಸಿದರು.
ಮತ್ತೊಬ್ಬ ಅತಿಥಿಯಾಗಿ ಆಗಮಿಸಿದ್ದ ಪರಿಸರ ಪ್ರೇಮಿ ಆಗಿರುವ ಶ್ರೀ ಈರಣ್ಣ ಆಯುಕ್ತರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದಸ್ಯರಿಗೆ ಪ್ರಾಧಿಕಾರದ ವತಿಯಿಂದ ಸಹಾಯ ಹಸ್ತ ನೀಡುವುದಾಗಿ ತಿಳಿಸಿದರು .
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮತ್ತೊಬ್ಬ ಅಧಿಕಾರಿ ಶ್ರೀ ರವಿ ಶಂಕರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ ಸದಸ್ಯರು ವಿದ್ಯಾರ್ಥಿಗಳು ಹಾಗೂ ಕುಟುಂಬದ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂರಕ್ಕೂ ಹೆಚ್ಚು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿದರು, ಅಲ್ಲದೆ ಸಂಸ್ಥೆಯ ಅಧ್ಯಕ್ಷರಾದ ಕಿರಣ್ ಕುಮಾರ್ ಜೈನ್ ಅವರು ಮುಂದಿನ ದಿನಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಮುಂದುವರಿಸುವುದಾಗಿ ತಿಳಿಸಿದರು. ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಸದಸ್ಯರಾದ ಅಂ ಪನ್ನರಾಜ್ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಬೇಕು ಎಂದು ತಿಳಿಸುತ್ತಾ ಎಲ್ಲರನ್ನು ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







