ಮೈಸೂರು:
ಇದೇ ಮೊದಲ ಬಾರಿಗೆ ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚಾರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗುಲಾಬಿ ಹೂ ನೀಡಿ ಪ್ರವಾಸಿಗರನ್ನ ಸ್ವಾಗತಿಸಿದರು.
ವಿಶ್ವ ಪ್ರವಾಸೋದ್ಯಮ ದಿನಾಚಾರಣೆ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರವಾಸಿಗರಿಗೆ ಗುಲಾಬಿ ಹೂ ನೀಡಿ ಬಲೂನ್ ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಚಿವ ಜಿ.ಟಿ. ದೇವೇಗೌಡ, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ದಸರಾಗೆ ಈ ಬಾರಿ ಬೇರೆ ಬೇರೆ ದೇಶಗಳಿಂದ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ದಸರಾ ಫಲಕಗಳನ್ನ ಅಳವಡಿಸಿ ಪ್ರವಾಸಿಗರನ್ನ ಸೆಳೆಯುತ್ತಿದ್ದೇವೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/06/G-T-Devegowda.jpg)