ಹಾವೇರಿ
ಅಗಡಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ ನಂ.1ರ ಶಾಲಾ ಆವರಣದಲ್ಲಿ ಶುಕ್ರವಾರ ಸಸಿ ನೆಡುವ ಮೂಲಕ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕುಮಾರಿ ಮಾಲಾಶ್ರೀ ಅವರು ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು ಹಾಗೂ ಅಂತರ್ಜಲ ಹೆಚ್ಚಿಸಬೇಕು ಎಂದು ಹೇಳಿದರು ಹಾಗೂ ಮಕ್ಕಳಿಗೆ ಜಲ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕ ವಿ.ಪಿ.ಗೋಣಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ