ಮಾನಸಿಕ ಖಿನ್ನತೆ ಬಗ್ಗೆ ಅರಿವು ಮೂಡಿಸಿ: ಬಿರಾದಾರ್

ಬಳ್ಳಾರಿ

????????????????????????????????????

      ಸಮಾಜದ ಎಲ್ಲರೂ ಕೂಡ ಯಾವುದಾದರು ಒಂದು ಖಿನ್ನತೆಯಿಂದ ಬಳಲುತ್ತಿರುತ್ತಾರೆ. ಈ ಮಾನಸಿಕ ಖಿನ್ನತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಕೆಲಸ ಮಾಡಬೇಕು. ಯಾರೂ ಕೂಡ ಇದರಿಂದ ಬಳಲದಂತೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿ.ಸಿ.ಬಿರಾದಾರ್ ಹೇಳಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ವಕೀಲರ ಸಂಘ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ(ವಿಮ್ಸ್)ದ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಪರ್ಯಾಯ ವ್ಯಾಜ್ಯಗಳ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಅರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

     ಆಧ್ಯಾತ್ಮಿಕ ಅಧ್ಯಯನದಿಂದ ಈ ರೀತಿಯ ಮಾನಸಿಕ ಕಾಯಿಲೆಗಳನ್ನು ಹೋಗಲಾಡಿಸಲು ಸಾಧ್ಯ ಎಂದು ಹೇಳಿದ ಅವರು, ಇಂದಿನ ಯುವಜನರನ್ನು ಮಾನಸಿಕ ಖಿನ್ನತೆಯಿಂದ ಹೊರತರಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಮಾನಸಿಕ ಅರೋಗ್ಯ ವಿಭಾಗದ ಅಧಿಕಾರಿಗಳು ಕೆಲಸ ಮಾಡುವುದರ ಮೂಲಕ ಯುವಜನರನ್ನು ಖಿನ್ನತೆಯಿಂದ ಹೊರತರುವ ಕೆಲಸ ಎಂದರು.

    ನಂತರ ವಿಮ್ಸ್‍ನ ಮಾನಸಿಕ ಆರೋಗ್ಯ ತಜ್ಞ ಕೊಟ್ರೇಶ್ ಅವರು ವಿಶೇಷ ಉಪನ್ಯಾಸ ನೀಡುತ್ತಾ, ಮನೋ ಚೈತನ್ಯ ಯೋಜನೆಯಡಿ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿ ಮಂಗಳವಾರ ಕೌನ್ಸೆಲಿಂಗ್ ಮಾಡಿ ಉಚಿತ ಚಿಕಿತ್ಸೆ ಮತ್ತು ಸಲಹೆಗಳನ್ನು ನೀಡಲಾಗುತ್ತದೆ. ಮಾನಸಿಕ ಖಿನ್ನತೆಗೊಳಗಾದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.

      ಮಾನಸಿಕ ಆರೋಗ್ಯ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಬದಲಾಗುತ್ತಿರುವ ಜಗತ್ತಿನಲ್ಲಿ ಯುವಜನತೆ ಮತ್ತು ಮಾನಸಿಕ ಆರೋಗ್ಯ ವಿಷಯದ ಕುರಿತ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಭೀಮೇಶ್(ಫ್ರಥಮ), ಮಾರೇಶ(ದ್ವಿತೀಯ) ಮತ್ತು ಯರ್ರಿಸ್ವಾಮಿ(ತೃತೀಯ) ಅವರಿಗೆ ಬಹುಮಾನ ವಿತರಿಸಲಾಯಿತು.

      ಈ ಸಂದರ್ಭದಲ್ಲಿ 1ನೇ ಅಪರ ಸಿವಿಲ್ ನ್ಯಾಯಾಧೀಶ ಖಾಸಿಂ ಚೂರಿಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಡಾ.ರಾಜಶೇಖರರೆಡ್ಡಿ, ಮಾನಸಿಕ ತಜ್ಞ ಸಲೀಂ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ರವಿರಾಜಶೇಖರರೆಡ್ಡಿ ಸೇರಿದಂತೆ ನ್ಯಾಯಾಲಯದ ವಿವಿಧ ಶ್ರೇಣಿ ನ್ಯಾಯಾಧೀಶರು ಮತ್ತು ಸ್ತ್ರೀಶಕ್ತಿ ಸಂಘಗಳ ಸದಸ್ಯರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link