ದಾವಣಗೆರೆ
ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಯಶೋದಮ್ಮ ಮರುಳಪ್ಪನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಪಂಚಾಯತ್‍ನ ನಿಕಟ ಪೂರ್ವ ಅಧ್ಯಕ್ಷೆ ಶೈಲಜಾ ಬಸವರಾಜ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಸೋಮವಾರ ಇಲ್ಲಿನ ಜಿ.ಪಂ. ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಕ್ಷೇತ್ರದ ಬಿಜೆಪಿ ಸದಸ್ಯೆ ಯಶೋದಮ್ಮ ಮರುಳಪ್ಪ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 29 ಸದಸ್ಯರ ಬಲ ಇರುವ ದಾವಣಗೆರೆ ಜಿಲ್ಲಾ ಪಂಚಾಯತ್‍ನಲ್ಲಿ 16 ಜನ ಸದಸ್ಯರ ಕೋರಂನೊಂದಿಗೆ ಸೋಮವಾರ ನಡೆದ ಅಧ್ಯಕ್ಷರ ಆಯ್ಕೆಯ ಚುನಾವಣೆ ಪ್ರಕ್ರಿಯೆಯಲ್ಲಿ ಹೊದಿಗೆರೆ ಜಿ.ಪಂ. ಕ್ಷೇತ್ರದ ಬಿಜೆಪಿ ಸದಸ್ಯೆ ಯಶೋಶಧಮ್ಮ ಮರುಳಪ್ಪನವರೊಬ್ಬರೇ ಎರಡು ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಒಂದಕ್ಕೆ ಕೆ.ವಿ. ಶಾಂತಕುಮಾರಿ ಸೂಚಕರಾಗಿದ್ದರೆ, ಮೊತ್ತೊಂದರಲ್ಲಿ ಬಿ.ಎಂ. ವಾಗೇಶಸ್ವಾಮಿ ಸೂಚಕರಾಗಿದ್ದರು.
ನಾಮಪತ್ರ ಪಡೆಯಲು ಅವಕಾಶ ಇದ್ದ ಸಂದರ್ಭದಲ್ಲಿ ನಾಮಪತ್ರ ಯಾರೂ ವಾಪಾಸು ಪಡೆಯದ ಮತ್ತು ನಾಮಪತ್ರಗಳು ಕ್ರಮಬದ್ಧವಾಗಿದ್ದ ಕಾರಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಯಶೋಧಮ್ಮ ಮರುಳಪ್ಪನವರು ಜಿಲ್ಲಾ ಪಂಚಾಯತ್‍ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು
ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಜಿ. ನಜ್ಮಾ ಇದ್ದರು. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಯಶೋದಮ್ಮ ಅವರನ್ನು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಶುಭ ಕೋರಿ, ಸಭಾಂಗಣದಿಂದ ಹೊರ ನಡೆದರು.ಯಶೋದಮ್ಮ ಅವರು ಅಧ್ಯಕ್ಷರಾಗಿ ಅಯ್ಕೆಯಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯರು, ಅಧಿಕಾರಿಗಳು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅವರನ್ನು ಅಭಿನಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
