ಗೌರಸಮುದ್ರ ಮಾರಮ್ಮ ದೇವಿ ದೇವಸ್ಥಾನ ಆವರಣದಲ್ಲಿ ಯಾತ್ರಿ ನಿವಾಸ ನಿರ್ಮಿಸುವ ಭರವಸೆ

ಚಳ್ಳಕೆರೆ

         ರಾಜ್ಯದಲ್ಲಿಯೇ ಅತ್ಯಂತ ಪ್ರಭಾವವನ್ನು ಹೊಂದಿರುವ ಬುಡಕಟ್ಟು ಸಮುದಾಯದ ಭಕ್ತರ ಆರಾಧ್ಯ ದೈವವಾದ ಗೌರಸಮುದ್ರ ಶ್ರೀಮಾರಮ್ಮ ದೇವಿ ದೇವಸ್ಥಾನಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಸುಸಜ್ಜಿತ ಯಾತ್ರಿ ನಿವಾಸವನ್ನು ನಿರ್ಮಿಸಿಕೊಡುವುದಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಭರವಸೆ ನೀಡಿದ್ಧಾರೆ.

        ಅವರು, ಗುರುವಾರ ತಳಕು ಹೋಬಳಿ ಗೌರಸಮುದ್ರ ಗ್ರಾಮದ ಮಾರಮ್ಮ ದೇವಿದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯಿತಿ ಅನುದಾನ 6 ಲಕ್ಷ ವೆಚ್ಚದ ಹೈಮಾಸ್ ವಿದ್ಯುತ್ ಕಂಬವನ್ನು ದೇವಸ್ಥಾನದ ಮುಂಭಾಗದಲ್ಲಿ ಅಳವಡಿಸಿದ್ದು, ಅದನ್ನು ಉದ್ಘಾಟಿಸಿ ಮಾತನಾಡಿದರು. ಗೌರಸಮುದ್ರ ಶ್ರೀಮಾರಮ್ಮ ದೇವಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಪ್ರತಿವರ್ಷ ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸುವ ಭಕ್ತರಿಗೆ ತಂಗಲು ಸೂಕ್ತ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಯಾತ್ರಿ ನಿವಾಸ ನಿರ್ಮಿಸಲು ನಿರ್ಧರಿಸಲಾಗಿದೆ ಎಂದರು.

           ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಓಬಳೇಶ್ ಮಾತನಾಡಿ, ಮಾರಮ್ಮದೇವಿಯ ಜಾತ್ರೆ ಇಡೀ ತಾಲ್ಲೂಕಿಗೆ ಹಬ್ಬವಿದ್ದಂತೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಭಾಗವಹಿಸುವ ಈ ಜಾತ್ರೆ ರಾಜ್ಯದಲ್ಲೇ ಪ್ರಸಿದ್ದಿ. ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ನನಗೆ ದೇವಿಯ ಕೃಪೆಯಿಂದಲೇ ದೊರಕಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು.

        ಕಾರ್ಯಕ್ರಮದಲ್ಲಿ ಹಿರೇಹಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲಮ್ಮ, ಸದಸ್ಯರಾದ ಕುರಿಓಬಣ್ಣ, ಜಯಣ್ಣ, ಓಬಣ್ಣ, ಜಯಣ್ಣ, ಮುನಿಸ್ವಾಮಿ, ಎಂ.ಚಂದ್ರಣ್ಣ, ವೀರಭದ್ರಪ್ಪ, ಕಟ್ಟಡ ಪಾಲಯ್ಯ, ಶ್ರೀನಿವಾಸ್, ಪಾಲಯ್ಯ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap