ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಧಿಡೀರ್ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಶೃಂಗೇರಿಯ ಮಾಜಿ ಶಾಸಕ ಡಿ.ಎನ್ ಜೀವರಾಜ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು. ಬಳಿಕ ನೇರವಾಗಿ ದೇವಸ್ಥಾನಕ್ಕೆ ತೆರಳಿ ಶಾರದಾಂಬೆಯ ದರ್ಶವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಟಿಕೆಟ್ ಘೋಷಣೆಗೂ ಮುನ್ನ ಜಗದ್ಗುರುಗಳ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ