ಬೆಳಗಾವಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲೇ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ‘ಸರ್ಕಾರ ಉರುಳಿಸಲು ನಾವೇನು ಆಪರೇಷನ್ ಕಮಲ ಮಾಡುತ್ತಿಲ್ಲ, ನಮಗೆ ಅದರ ಅಗತ್ಯವೂ ಇಲ್ಲ. ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ತನ್ನ ಆಂತರಿಕ ಭಿನ್ನಾಭಿಪ್ರಾಯಗಳಿಂದಲೇ ಉರುಳಲಿದೆ’ ಎಂದರು.
ಕಾಂಗ್ರೆಸ್‍ನಲ್ಲಿ ದಿನೇ ದಿನೇ ಅಸಮಾಧಾನ ಸ್ಫೋಟಗೊಳ್ಳುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಮೈತ್ರಿ ಸರ್ಕಾರ ಗೊಂದಲದ ಗೂಡಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ