ಬೆಂಗಳೂರು
ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಡೆಸಲು ತೀರ್ಮಾನ ಕೈಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.ನಗರದ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಗುಪ್ತದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಟೆಲಿಫೋನ್ ಕದ್ದಾಲಿಕೆಯ ಸಿಬಿಐ ತನಿಖೆಯ ಬಗ್ಗೆ ಚರ್ಚೆ ನಡೆಸಿದರು.
ಟೆಲಿಫೋನ್ ಕದ್ದಾಲಿಕೆಯ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದೇನೆ. ಸಿಬಿಐಗೆ ಎಲ್ಲ ಸಹಕಾರ ನೀಡಿ ಎಂದು ಮುಖ್ಯಮಂತ್ರಿಗಳು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ