ಬೆಂಗಳೂರು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿದ್ದು, ಎಂದು ಈ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಕೆ, ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಇದನ್ನು ವಿಧಾನಮಂಡಲ ಅಧಿವೇಶದದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಪ್ರಸ್ತಾಪ ಮಾಡುತ್ತೇನೆ. ಜೊತೆಗೆ ನನ್ನ ಕಾಲದಲ್ಲಿ ಕೊಟ್ಟಿರುವ ಎಲ್ಲಾ ಅನುದಾನಗಳನ್ನು ಸ್ಥಗಿತ ಮಾಡಲಾಗಿದ್ದು, ಈ ಬಗ್ಗೆಯೂ ಚರ್ಚಿಸುತ್ತೇನೆ ಎಂದರು.
ಇನ್ನು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜೆಡಿಎಸ್ ಪಕ್ಷ ಸದಾ ಹೋರಾಟಗಳನ್ನ ಮಾಡಿದೆ.ಈಗಲೂ ಸಹ ದೇವೇಗೌಡರ ನೇತೃತ್ವದಲ್ಲಿ ಮುಂದುವರೆಸುತ್ತೇವೆ. ಅನುದಾನಗಳ ಕಡಿತದ ಬಗ್ಗೆ ಇಲಾಖೆಯ ಸಚಿವರು, ಅಧಿಕಾರಿಗಳು ಸ್ಪಂದಿಸಿದ್ದಾರೆ. ಆದರೆ ಸಿಎಂ ಬಳಿ ಫೈಲ್ ಗಳಿವೆ, ಅವರು ಅಂತಿಮವಾಗಿ ತೀರ್ಮಾನ ಮಾಡಬೇಕು. ಅವರು ಯಾವಾಗ ಕಡತಗಳಿಗೆ ಸಹಿ ಹಾಕ್ತಾರೋ ಎಂದು ಕಾಯುತ್ತಿದ್ದೇನೆಂದು ತಿಳಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ