ಯಡಿಯೂರಪ್ಪ ಬರಿ ಹಗಲುಗನಸು ಕಾಣುತ್ತಿದ್ದಾರೆ: ಡಿ ಕೆ ಶಿವಕುಮಾರ್

ಬೆಂಗಳೂರು

    ಬಿಜೆಪಿ ರಾಜ್ಯಾಧ್ಯದಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚನೆ ಮಾಡುತ್ತೇವೆ ಎಂದು ಬರಿ ಹೇಳಿಕೆಗಳನ್ನು ಕೊಡುವುದು ಇತ್ತೀಚೆಗೆ ಹೆಚ್ಚಾಗಿದೆ. ಹಗಲುಗನಸು ಕಾಣುತ್ತಿರುವ ಅವರ ಕೈಯಿಗೆ ಮೈತ್ರಿ ಸರ್ಕಾರದ ಯಾವೊಬ್ಬರ ಶಾಸಕರು ಸಿಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಗುತ್ತಿಗೆದಾರರು, ಅಧಿಕಾರಿಗಳ ನ್ನು ಸಂಪರ್ಕಿಸಿ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದು ಆಮಿಷ ಒಡ್ಡುತ್ತಿದ್ದಾರೆ. ಬಿಜೆಪಿಗೆ ಪಕ್ಷದ ಒಬ್ಬ ಶಾಸಕ ಈಗಾಗಲೇ ಹೋಗಿ ಆಗಿದೆ. ಮತ್ತೆ ಯಾರೂ ಬಿಜೆಪಿಗೆ ಹೋಗುವುದಿಲ್ಲ. ಹಿಂಬಾಗಿಲ ಮೂಲಕ ಸರ್ಕಾರ ರಚನೆಗೆ ಮುಂದಾಗಿರುವ ಯಡಿಯೂರಪ್ಪ ಪ್ರತಿದಿನ ಕಾಂಗ್ರೆಸ್ ಶಾಸಕರನ್ನು ಸಂಪರ್ಕ ಮಾಡುತ್ತಿದ್ದಾರೆ. ಯಡಿಯೂರಪ್ಪ ನಡೆಸುತ್ತಿರುವ ಆಪರೇಷನ್ ಕಮಲದ ಕುರಿತು ತಮ್ಮ ಬಳಿಕ ಪುರಾವೆ ಇದೆ ಎಂದು ಅವರು ತಿಳಿಸಿದರು.

     ಬಿಜೆಪಿಯ ಕಾರ್ಯಕರ್ತರನ್ನು ಸಂಪರ್ಕಿಸಿ ವಿಫಲವಾಗಿರುವ ಡಿ.ಕೆ.ಶಿವಕುಮಾರ್ ಒಬ್ಬ ಪೇಪರ್ ಹುಲಿ ಎಂಬ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಾವು ಯಾವ ಪೇಪರೂ ಅಲ್ಲ, ಟೈಗರೂ ಅಲ್ಲ. ತಾವೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದರು.

      ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮಡಿಕೇರಿ ರೆಸಾರ್ಟ್ ವಾಸ್ತವ್ಯವನ್ನು ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಗಲು ರಾತ್ರಿಯನ್ನದೇ ಕುಮಾರಸ್ವಾಮಿ ಕೆಲಸ ಮಾಡಿದ್ದಾರೆ. ಹೀಗಾಗಿ ಆರೋಗ್ಯ ಸುಧಾರಣೆಗೆ ರೆಸಾಟ್ರ್ನಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದಾರೆ. ಸಚಿವ ಸಂಪುಟ ಸಭೆ ಸೇರಿದಂತೆ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಏನು ಕೆಲಸ ಮಾಡಬೇಕೋ ಅದೆಲ್ಲವನ್ನೂ ಅವರು ಮಾಡುತ್ತಿದ್ದಾರೆ. ಇತ್ತೀಚೆಗೆ ಕೆಲ ಮಾಧ್ಯಾಮಗಳು ಕುಮಾರಸ್ವಾಮಿ ಅವರನ್ನು ಟೀಕಿಸುವುದನ್ನೇ ರೂಢಿಗತ ಮಾಡಿಕೊಂಡು ಬಿಟ್ಟಿವೆ ಎಂದು ಅವರು ಸಿಡಿಮಿಡಿಗೊಂಡರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap