ಯಲ್ಲಮ್ಮ ದೇವಿಗೆ ಜಲದಿಗ್ಬಂಧನ..!

ಕಲಬುರಗಿ

     ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜಿನಿಂದ ಒಂದು ಲಕ್ಷ ಕ್ಯುಸೆಕ್ ನೀರು ಭೀಮಾ ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ
ಯಲ್ಲಮ್ಮ ದೇವಿಗೆ ಜಲ ದಿಗ್ಬಂಧನವಾಗಿದೆ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಣ್ಣೂರು ಗ್ರಾಮದಲ್ಲಿರುವ ಯಲ್ಲಮ್ಮ ದೇವಸ್ಥಾನದ ದೇವಾಲಯದ ಸುತ್ತಲೂ ನೀರು ಆವೃತವಾಗಿವೆ.

    ಅಫಜಲಪುರ ತಾಲ್ಲೂಕಿನ ಸೊನ್ನ ಬ್ರೀಡ್ಜ್ ಕಂ. ಬ್ಯಾರೇಜ್ ಆಗಿದ್ದು, ನೀರು ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ನದಿ ತೀರದ ಜನರಲ್ಲಿ ಪ್ರವಾಹ ಆತಂಕ ಮನೆ ಮಾಡಿದೆ.

    ಭೀಮಾ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಮತ್ತು ಉಜನಿ ಜಲಾಶಯದಿಂದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ರವಿವಾರ ಮಧ್ಯಾಹ್ನ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಹ್ ನಿಂದ 1,02,000ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಬಿಡಲಾಗಿದೆ ಎಂದು ಕೆ.ಎನ್.ಎನ್.ಎಲ್. ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.

    ಜಲಾನಯನ ಪ್ರದೇಶದಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಿರುವುದರಿಂದ ಭೀಮಾ ನದಿಗೆ ಒಳಹರಿವು ಹೆಚ್ಚಳವಾಗುತ್ತಿದೆ. ಮುಂದೆಯೂ ಒಳಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಒಳಹರಿವಿನಷ್ಟೆ ಪ್ರಮಾಣದ ನೀರು ನದಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

    ಆದ್ದರಿಂದ ಸೊನ್ನ ಬ್ಯಾರೇಜ್ ಕೆಳಭಾಗದಲ್ಲಿರುವ ಅಫಜಲಪುರ, ಜೇವರ್ಗಿ ಮತ್ತು ಚಿತ್ತಾಪುರ ತಾಲೂಕಿನ ಗ್ರಾಮಗಳ ರೈತರು ನದಿಯ ದಡಕ್ಕೆ ತೆರಳಬಾರದು. ಅಲ್ಲದೇ, ಜಾನುವಾರುಗಳನ್ನು ನದಿಯ ದಡಕ್ಕೆ ಬಿಡದಂತೆ ಎಚ್ಚರ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

   ಅದೇ ರೀತಿ ಸೊನ್ನ ಬ್ಯಾರೇಜಿನ ಕೆಳಗಡೆ ಬರುವ ಇನ್ನಿತರ ಬ್ಯಾರೇಜ್‍ಗಳ ಅಧಿಕಾರಿಗಳು ಎಚ್ಚರವಹಿಸುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap