ಬೆಂಗಳೂರು
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದ್ದು . ಮಲೆನಾಡು ಭಾಗದಲ್ಲಿ ಕೆಲವು ದಿನಗಳಿಂದೀಚೆಗೆ ನಿರಂತರ ಮಳೆಯಾಗುತ್ತಿದೆ.ಈ ನಡುವೆ ಭಾರತೀಯ ಹವಾಮಾನ ಇಲಾಖೆ, ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಏಪ್ರಿಲ್ 26ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುತ್ತಿದೆ. ಬೆಂಗಳೂರು, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.