ಹಿರಿಯೂರು :
ವಿದ್ಯಾರ್ಥಿ ಹಂತದಲ್ಲಿಯೇ ಯೋಗ ಮತ್ತು ಪ್ರಾಣಯಾಮದ ಸತತ ಅಭ್ಯಾಸ ಮಾಡುವುದರಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಶ್ರೀಮೋದಕಪ್ರಿಯ ಯೋಗ ಅಸೋಷಿಯೇಷನ್ ವತಿಯಿಂದ ಏರ್ಪಡಿಸಲಾಗಿದ್ದ ಸ್ಕೂಲ್ ಲೆವೆಲ್ ಯೋಗ ಕಾಂಪಿಟೇಷನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಯೋಗ ಶಿಕ್ಷಣವು ಮಕ್ಕಳ ಏಕಾಗ್ರತೆ ಹಾಗೂ ನೆನಪಿನ ಶಕ್ತಿ ಹೆಚ್ಚಿಸುವಲ್ಲಿ ಸಹ ಸಹಕಾರಿಯಾಗಲಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಹ ಯೋಗಶಿಕ್ಷಣ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾದ ಶಿವಾನಂದ್, ಮುಖ್ಯಶಿಕ್ಷಕಿಯರುಗಳಾದ ಶ್ರೀಮತಿ ಹೇಮಲತಾ, ಶ್ರೀಮತಿ ಸೌಮ್ಯ, ಶ್ರೀಮತಿ ಶಾಂತಾಬಾಯಿ, ವ್ಯವಸ್ಥಾಪಕಿ ಮೊಹಸೀನಾ ಫೀರ್ದೋಸ್, ಶಿಕ್ಷಕರಾದ ಉಮೇಶ್, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಉತ್ತಮ ಯೋಗಪಟುಗಳಿಗೆ ಪದಕಗಳನ್ನು ನೀಡಿ ಗೌರವಿಸಲಾಯಿತು. ಹಾಗೂ ಎಲ್ಲಾ ಯೋಗಶಿಕ್ಷಣ ಶಿಬಿರಾರ್ಥಿಗಳಿಗೂ ಪ್ರಶಸ್ತಿಪತ್ರಗಳನ್ನು ನೀಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
