ಯೋಗಿಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರ.!

ಬೆಂಗಳೂರು:

         ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿದೆ .2017ರಲ್ಲಿ ಯೋಗಿಶ್ ಗೌಡ ಅವರ ಕೊಲೆಯಾಗಿತ್ತು ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಬಂದ ದುಷ್ಕರ್ಮಿಗಳ ತಂಡ ಯೋಗಿಶ್ ಗೌಡ ಅವರನ್ನು ಹತ್ಯೆ ಮಾಡಿತ್ತು. ಜಿಮ್ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸ್ ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿಯವರ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗಿಶ್ ಗೌಡ ಅವರ ತಾಯಿ ಆರೋಪಿಸಿದ್ದರು.

    ಈ ಎಲ್ಲ ಬೆಳವಣಿಗೆ ನಡುವೆ 2017ರಲ್ಲಿ ಯೋಗಿಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರುವ ಮೂಲಕ ಹಲವು ಅಚ್ಚರಿಗೆ ಕಾರಣವಾಗಿದ್ದರು . ಆದರೆ ಬಿಜೆಪಿ ನಾಯಕರು ಮಲ್ಲಮ್ಮ ಅವರನ್ನು ಕಾಂಗ್ರೆಸ್ ನಾಯಕರು ಹೈಜಾಕ್ ಮಾಡಿದ್ದಾರೆ. ಬೆದರಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲ್ಲಮ್ಮ, ನಾನು ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದರು

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap