ಬೆಂಗಳೂರು 
ಜೀವನದಲ್ಲಿ ಜಿಗುಪ್ಸೆ ಹೊಂದಿ ಮಾನಸಿಕ ಅಸ್ವಸ್ಥ ಯುವಕನೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಡುಗೋಡಿಯ ಗಣೇಶ ದೇವಸ್ಥಾನದ ಬಳಿ ವಾಸಿಸುತ್ತಿದ್ದ ಇಮಾಂಶು ಮಿಶ್ರ (19)ಎಂದು ನೇಣಿಗೆ ಶರಣಾದವರನ್ನು ಗುರುತಿಸಲಾಗಿದೆ.ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಿಶ್ರಾಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದರೂ, ಸಂಪೂರ್ಣವಾಗಿ ಗುಣಮುಖವಾಗಿರಲಿಲ್ಲ.
ತಂದೆ – ತಾಯಿ ಹೊರಗಡೆ ಹೋಗಿದ್ದಾಗ ರಾತ್ರಿ 8ರ ವೇಳೆ ಮಿಶ್ರ ನೇಣಿಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿರುವ ಆಡುಗೋಡಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕುಡುಕ ನೇಣು
ಸರಿಯಾಗಿ ಕೆಲಸಕ್ಕೆ ಹೋಗದೆ ಕುಡಿತದ ಚಟ ಅಂಟಿಸಿಕೊಂಡಿದ್ದ ವ್ಯಕ್ತಿಯೊಬ್ಬರು,ಮದ್ಯಪಾನಕ್ಕೆ ಹಣ ಸಿಗದಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಹಳ್ಳಿಯಲ್ಲಿ ನಡೆದಿದೆ.
ಶಿವನಹಳ್ಳಿಯ ಉಮೇಶ್ (50)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಮನೆಯವರೆಲ್ಲಾ ಸೋಮವಾರ ರಾತ್ರಿ ಹೊರಗಡೆ ಹೋಗಿದ್ದಾಗ ಉಮೇಶ್ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವೇಶ್ವರ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








