ಯುವ ಜನತೆ ತಂಬಾಕು ಸೇವನೆಯಿಂದ ದೂರವಿರಿ : ಬಿ.ದೇವಣ್ಣ

ಬಳ್ಳಾರಿ

    ಜಿಲ್ಲಾ ಗೃಹರಕ್ಷಕದಳ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ಮುಕ್ತ ದಿನಾಚಾರಣೆ ಕಾರ್ಯಕ್ರಮವನ್ನು ನಗರದ ಗೃಹರಕ್ಷಕದಳ ತರಬೇತಿ ಕೇಂದ್ರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರಕ್ತಭಂಡಾರ ಉಪ ಸಮಿತಿ ಕೋ-ಚೇರ್ಮೆನ್ ಬಿ.ದೇವಣ್ಣ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳಿಂದ ಮಾನವ ದೇಹಕ್ಕೆ ಬಹಳ ಹಾನಿ ಉಂಟಾಗುತ್ತದೆ. ನಮ್ಮ ದೇಶದಲ್ಲಿ ಯುವಜನತೆ ಸಿಗರೇಟ್, ಬೀಡಿ, ತಂಬಾಕು, ಗುಟ್ಕಾ ಮತ್ತು ಅನೇಕ ವಿಷಕಾರಿ ಪದಾರ್ಥಗಳನ್ನು ಸೇವನೆ ಮಾಡುತ್ತಿದ್ದಾರೆ. ಇವುಗಳ ಸೇವನೆಯಿಂದ ಆಗುವ ಪ್ರಾಣನಷ್ಟದ ಕುರಿತು ಯುವ ಜನರಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

    ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎ.ಷಕೀಬ್ ಅವರು ಅಧ್ಯಕ್ಷತೆವಹಿಸಿ ಮಾತನಾಡಿ, ನಮ್ಮ ದೇಶದ ಜನರಿಗೆ ವಿಷ ಪದಾರ್ಥಗಳ ಬಗ್ಗೆ ಅರಿವು ಮತ್ತು ಅವುಗಳ ಬಗ್ಗೆ ಮಾಹಿತಿ ಬಹಳ ಕಡಿಮೆ ಇದ್ದು, ತಂಬಾಕುನಿಂದ ಉಂಟಾಗುವ ಬಾಯಿ ಮತ್ತು ಗಂಟಲು ಕ್ಯಾನ್ಸರ್ ಇದರಿಂದ ಸಾವಿರಾರು ಜನ ತಮ್ಮ ಪ್ರಾಣವನ್ನು ಕಳೆದು ಕೊಳ್ಳುತ್ತಿದ್ದಾರೆ ಜೊತೆಗೆ ಬೀಡಿ, ಸಿಗರೇಟ್, ಗುಟ್ಕಾ ಮತ್ತು ತಂಬಾಕು ಇನ್ನಿತ್ತರ ವಿಷ ಸೇವನೆಯ ಪದಾರ್ಥಗಳನ್ನು ಸೇವನೆ ಮಾಡುತ್ತಿದ್ದಾರೆ.

    ಈ ದುಷ್ಚಟಗಳಿಂದ ಇಂದಿನ ಯುವಕರು ದೂರ ಇರುವುದೇ ಲೇಸು ಎಂದು ಹೇಳಿದರು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾದ ಉಮಾ ಮಹೇಶ್ವರಿ, ಗೃಹರಕ್ಷಕದಳದ ಪ್ಲಟೂನ್ ಕಮಾಂಡರ್‍ಗಳಾದ ಜೆ.ಸುರೇಶ್, ಬಿ.ಕೆ.ಬಸವಲಿಂಗ ಮತ್ತು ಗೃಹರಕ್ಷಕದಳ ಸಿಬ್ಬಂದಿ ವರ್ಗ ಸೇರಿದಂತೆ ಸುಮಾರು 100 ಗೃಹರಕ್ಷಕರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link