ಜಾಗೃತಿ ಜಾಥಾಕ್ಕೆ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಚಾಲನೆ

ಹಾವೇರಿ

      ರಾಷ್ಟ್ರೀಯ ಡೆಂಗ್ಯೂ ದಿನದ ಅಂಗವಾಗಿ ಸೊಳ್ಳೆಗಳ ನಿಯಂತ್ರಣ ಹಾಗೂ ಪರಿಸರ ಸ್ವಚ್ಛತೆ ಅರಿವು ಮೂಡಿಸಲು ನಗರದಲ್ಲಿ ಆಯೋಜಿಸಲಾದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ಚಾಲನೆ ನೀಡಿದರು.

      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ ಹಾಗೂ ಜಿಲ್ಲಾ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಾಥಾವನ್ನು ಗುರುವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯು ತಡೆಯ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ನಿರಂತರ ಆರೋಗ್ಯ ಶಿಕ್ಷಣದ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

      ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಎಸ್, ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ನಾಗರಾಜ ನಾಯಕ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಸುಹೀಲ್ ಹರವಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ. ಪ್ರಭಾಕರ ಕುಂದೂರು. ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಮಡಿವಾಳರ, ಪಿ.ಎನ್ ಪಾಟೀಲ್, ಜಗದೀಶ ಕೆ, ರವಿ ಕೆ.ಆರ್, ರತ್ನಂ, . ಸಿ.ಎಫ್ ಹೆಡಿಯಾಲ, ಸರ್ಕಾರಿ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link