ಚಿತ್ರದುರ್ಗ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಎಸ್.ಎಸ್.ಪ್ರಕಾಶಂರವರ ಆದೇಶದಂತೆ ಎ.ಜಾಕೀರ್‍ಹುಸೇನ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ
ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ಲಾ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಾಬು ಇವರುಗಳನ್ನು ನೇಮಕ ಮಾಡಲಾಗಿದೆ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್‍ರವರು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಮಿಕ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಬಲ ತುಂಬುವಂತೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಆರ್.ಕೆ.ನಾಯ್ಡು, ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಕೆ.ರಾಜಣ್ಣ, ಐ.ಎನ್.ಟಿ.ಯು.ಸಿ.ಜಿಲ್ಲಾಧ್ಯಕ್ಷ ಸೈಯದ್ ಸೈಫುಲ್ಲಾ, ರೆಹಮಾನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಷಂಶುದ್ದಿನ್, ಪ್ರಧಾನ ಕಾರ್ಯದರ್ಶಿ ಸನಾವುಲ್ಲಾ, ಮರುಳಾರಾಧ್ಯ, ನ್ಯಾಯಾವಾದಿಗಳಾದ ರವೀಂದ್ರ, ಮಹಮದ್‍ರಫಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.