ಬೆಂಗಳೂರು
ಬೆಂಗಳೂರಿನ ರಾಜಕಾರಣಿಗಳಲ್ಲಿ ಸದಾ ಚಟುವಟಿಕೆಯಿಂದ ಿರುವ ಶಾಸಕ ಜಮೀರ್ ಅಹ್ಮದ್ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ವರದಿಯಾಗಿದೆ .
ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ . ಮೂಲಗಳ ಪ್ರಕಾರ ಜಮೀರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಮತ್ತು ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದು ಎಂದು ವೈಧ್ಯರು ತಿಳಿಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಮಾನಸಿಕವಾಗಿ ಬೇಸರಗೊಂಡಿದ್ದರು ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ.
