ಬೆಂಗಳೂರು
ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಜುಮೋಟೋ ಡಿಲೆವರಿ ಬಾಯ್ ಮೃತಪಟ್ಟಿರುವ ದುರ್ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರು ರಸ್ತೆಯಲ್ಲಿ ನಡೆದಿದೆ.
ರಾಜಾಜಿನಗರದ ಜುಮೋಟೋ ಆಹಾರ ಪೂರೈಕೆಯ ಘಟಕದಲ್ಲಿ ಡೆಲಿವೆರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನಂಜನಗೂಡು ಮೂಲದ ರಮೇಶ್ (24)ಎಂದು ಮೃತಪಟ್ಟ ಯುವಕನನ್ನು ಗುರುತಿಸಲಾಗಿದೆ.ಆಹಾರವನ್ನು ಪೂರೈಕೆ ಮಾಡಲು ಮಂಗಳವಾರ ಬೆಳಿಗ್ಗೆ 11.30ರ ವೇಳೆ ಬೈಕ್‍ನಲ್ಲಿ ರಮೇಶ್ ತುಮಕೂರು ರಸ್ತೆಯಲ್ಲಿ ಹೋಗುತ್ತಿದ್ದರು.
ಮಾರ್ಗಮಧ್ಯೆ ಸಿಎಂಟಿ ಜಂಕ್ಷನ್‍ನಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ರಮೇಶ್ ಅವರನ್ನು ಕೂಡಲೇ ಪೀಪಲ್ ಟ್ರೀ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ಲಾರಿ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








