ಜಲಸಂರಕ್ಷಣೆಯ ಶಾಶ್ವತ ಕ್ರಮ ಅಗತ್ಯ : ದೇಶಪಾಂಡೆ

ಬೆಂಗಳೂರು:

       ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಇತರೇ ಅಧಿಕಾರಿಗಳು ಇಂದು ವೀಡಿಯೋ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಹಾಗೂ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುವುದರ ಜೊತೆ ಜೊತೆಗೆ ಜಲಕ್ಷಾಮ ನಿವಾರಣೆಗಾಗಿ ಶಾಶ್ವತ ಕ್ರಮಗಳನ್ನು ಕೈಗೊಳ್ಳುವ ತುರ್ತು ಅಗತ್ಯವಿದೆ ಎಂಬುದನ್ನು ಕಂದಾಯ ಸಚಿವ, ದೇಶಪಾಂಡೆರವರು ಒತ್ತಿ ಹೇಳಿದ್ದು, ಈ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿರುವುದೇ ಅಲ್ಲದೇ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು ಹಾಗೂ ಇತರೇ ಅಧಿಕಾರಿಗಳಿಗೂ ಸಹ ಈ ಬಗ್ಗೆ ಚಿಂತನೆ ನಡೆಸಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಲಹೆ ನೀಡಿದ್ದಾರೆ.

        ಪ್ರಸ್ತುತ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಯೋಜನೆಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸುವುದು ಮತ್ತು ಜಿಲ್ಲೆಯ ಎಲ್ಲಾ ಗ್ರಾಮಗಳನ್ನು ಜಲಧಾರೆ – ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಒಳಪಡಿಸಲು ತುರ್ತು ಕ್ರಮ ಕೈಗೊಳ್ಳಲು ಸೂಚಿಸುವುದರ

      ಜೊತೆಗೆ ಶಾಶ್ವತ ಕ್ರಮಗಳ ಬಗ್ಗೆ ವಿವರಿಸುತ್ತಾ ಸಚಿವರು ಜಲಾಮೃತ ಯೋಜನೆಯಡಿ ಕೆರೆಗಳ ಹೂಳೆತ್ತುವುದು ಹಾಗೂ ಈ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸರ್ಕಾರೇತರ ಮತ್ತು ಖಾಸಗಿ ಸಂಸ್ಥೆಗಳನ್ನು ಪ್ರೇರೇಪಿಸುವುದು, ಅಪಾರ ಪ್ರಮಾಣದಲ್ಲಿ ಕೃಷಿ ಹೊಂಡ ನಿರ್ಮಿಸುವುದು, ಕೆರೆಗಳಿಗೆ ನದಿ ಮೂಲಕ ನೀರು ತುಂಬಿಸುವುದು, ಕೆರೆ, ಕುಂಟೆ, ಕಟ್ಟೆ, ಕಲ್ಯಾಣಿ ಇವುಗಳನ್ನು ಪುನಶ್ಚೇತನಗೊಳಿಸುವುದು, ಜಲಮೂಲಗಳಿಗೆ ಪರಸ್ಪರ ಸಂಪರ್ಕ ಕಲ್ಪಿಸುವುದು,

       ಮಳೆ ನೀರು ಸಂರಕ್ಷಣೆ, ನದಿ ಹರಿವು ಬದಲಾವಣೆ, ಜಲಮೂಲಗಳ ಸಂರಕ್ಷಣೆ, ಅರಣ್ಯ ಸಂರಕ್ಷಣೆ, ಅತಿ ಹೆಚ್ಚು ನೀರನ್ನು ಅವಲಂಭಿಸುವ ಬೆಳೆಗಳ ಬದಲಾಗಿ ಅತಿ ಕಡಿಮೆ ನೀರನ್ನು ಅವಲಂಭಿಸುವ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವುದು, ಪರಿಸರ ದೃಷ್ಠಿಯಿಂದ ಸಾಮಾಜಿಕ ಅರಣ್ಯ ಮತ್ತು ತೋಟಗಾರಿಕೆ ಯೋಜನೆಗಳಡಿ ಸಸಿಗಳನ್ನು ನೆಡುವಂತಹ ಕ್ರಮಗಳನ್ನು ಕೈಗೊಳ್ಳುವ ತುರ್ತು ಅಗತ್ಯವಿದೆ ಎಂಬುದನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದಾರೆ.

        ಜೊತೆಗೆ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವ್ಯಾಪಕ ಪ್ರವಾಸ ಕೈಗೊಳ್ಳದ ಜಿಲ್ಲಾಧಿಕಾರಿಗಳನ್ನು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು Sಆಖಈ ಹಾಗೂ ಟಾಸ್ಕ್ ಫೋರ್ಸ್ ಅಡಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಜಿಲ್ಲೆಗಳಲ್ಲಿ ಅಗತ್ಯ ಅನುದಾನ ಲಭ್ಯವಿದ್ದು, ಕಡಿಮೆ ಪ್ರಗತಿ ಸಾಧಿಸಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಅಲ್ಲದೇ, ಬರ ಪರಿಹಾರ ಕಾರ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಜಿಲ್ಲೆಗಳನ್ನು ಅಭಿನಂದಿಸಿದ್ದಾರೆ.

        ಕುಡಿಯುವ ನೀರು, ಮೇವು ಕೊರತೆ ಹಾಗೂ ಜನ ಉದ್ಯೋಗ ಅರಸಿ ಗುಳೆ ಹೋಗುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ಪ್ರಮುಖವಾಗಿ ಸುದ್ಧಿಯಾಗುತ್ತಿರುವುದನ್ನು ಸಭೆಯ ಗಮನಕ್ಕೆ ತಂದ ಸಚಿವರು ಪತ್ರಿಕಾ ವರದಿಯ ತುಣುಕುಗಳನ್ನು ಉದಾಹರಿಸಿ ಇನ್ನು ಮುಂದೆ ಈ ರೀತಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap