ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ನಡುವೆ ಅದ್ದೂರಿಯಾಗಿ ನಡೆಯಿತ್ತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸ್ವಾಮಿಯವರಿಗೆ ಅಭಿಷೇಕ, ಸುಪ್ರಭಾತ ಸೇವೆ,ಪಂಚಾಮೃತ ಅಭಿಷೇಕ ನಡೆಯಿತ್ತು.ಮಧ್ಯಾಹ್ನ 2ಗಂಟೆಗೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ನಡುವೆ ಜರುಗಿತ್ತು. ರಥೋತ್ಸವಕ್ಕೆ ಜಿಲ್ಲೆಯ ವಿವಿದಡೆಗಳಿಂದ ಭಕ್ತರು ಆಗಮಿಸಿದ್ದರು.
ಸುಡು ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಭಕ್ತರು ಸ್ವಾಮಿಯ ರಥೋವನ್ನು ಎಳೆದರು.ಸುಡು ಬಿಸಿಲಿನ ತಾಪಕ್ಕೆ ಭಕ್ತಾಧಿಗಳಿಗೆ ಅಲ್ಲಲ್ಲಿ ತಂಪಾದ ಪಾನೀಯ ಹಾಗೂ ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು.ಜಿಲ್ಲೆಯಿಂದ ಆಗಮಿಸಿದ ಭಕ್ತರು ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿಯ ದರ್ಶನ ಪಡೆದರು.ರಥೋತ್ಸವದಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ಚೇಳೂರು ಪೋಲೀಸರು ಸೂಕ್ತ ಬಂದೂಬಸ್ತ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರಯ್ಯ,ಮುಖಂಡರಾದ ಎಸ್ ಡಿ ದಿಲೀಪ್ ಕುಮಾರ್,ಸಿಂಗದಹಳ್ಳಿ ರಾಜ್ ಕುಮಾರ್,ಕರಿಯಪ್ಪ, ಶಿವನೇಹಳ್ಳಿ ಮಲ್ಲೇಶ್, ಸ್ವಾಮಿ,ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.