ಮೆದುಳಿಗೆ ಹೆಚ್ಚು ಕೆಲಸ ನೀಡಿದಷ್ಟೂ ಅದು ಕ್ರಿಯಾಶೀಲವಾಗುತ್ತದೆ

0
27

ಹುಳಿಯಾರು:

      ಹುಳಿಯಾರು-ಕೆಂಕೆರೆ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಎನ್.ಎಸ್.ಎಸ್, ರೆಡ್‍ಕ್ರಾಸ್, ಕ್ರೀಡಾ ಮತ್ತು ಉದ್ಯೋಗ ಭರವಸಾ ಕೋಶದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

       ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಸೇರಿದಂತೆ ಇದುವರೆಗೆ ಒಟ್ಟು ಒಂಬತ್ತು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗಿದ್ದು, ಪ್ರಸ್ತುತ ಬುಕ್ಕಾ ಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊ. ಬಿ.ಎಂ. ಗಂಗಾಧರ ಇವರು ಈ ಕಾರ್ಯಕ್ರಮದಲ್ಲಿ ಸಾಮಾನ್ಯ ಮನೋಸಾಮಥ್ರ್ಯವನ್ನು ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ಮೆದುಳಿಗೆ ಹೆಚ್ಚು ಹೆಚ್ಚು ಕೆಲಸ ನೀಡಿದಷ್ಟು ಅದು ಕ್ರಿಯಾಶೀಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಇವರು ಮನೋಸಾಮಥ್ರ್ಯದ ಪ್ರಶ್ನೆಗಳನ್ನು ಬಿಡಿಸುವಾಗ ನಿಖರತೆ, ತ್ವರಿತ ಗತಿ, ಸಮಯ ನಿರ್ವಹಣೆ, ಉತ್ತಮ ಅವಲೋಕನ ಇವು ಹೇಗೆ ಮುಖ್ಯವಾಗುತ್ತವೆ ಎಂಬುದನ್ನು ಉದಾಹರಣೆಗಳೊಂದಿಗೆ ವಿವರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆಯವರು ಮಾತನಾಡಿ ಕಾಲೇಜಿನ ಪ್ರತಿ ತರಗತಿಗಳೂ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಿತವಾಗಿ ನಡೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರೊ. ಆರ್.ಶಿವಯ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೊ. ಎಂ.ಜೆ. ಮೋಹನ್ ಕುಮಾರ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿಕೊಟ್ಟರು. ಉದ್ಯೋಗ ಭರವಸಾ ಕೋಶದ ಸಂಚಾಲಕ ಡಾ. ಲೋಕೇಶ ನಾಯಕ್, ಪ್ರೊ. ವಲಿ ಆರ್, ಡಾ. ಸುಷ್ಮಾ ಬಿರಾದಾರ್, ಪ್ರೊ. ಮಲ್ಲಿಕಾರ್ಜುನ್, ಉಪನ್ಯಾಸಕರಾದ ಚಂದ್ರಮೌಳಿ, ನಾಗರಾಜರಾವ್ ಹಾಗೂ ಜಯಪ್ರಕಾಶ್ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here