ನಾಯಕ ಸಮಾಜಕ್ಕೆ 7.5 ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯ

ರಾಣಿಬೆನ್ನೂರ:

        ನಾಯಕ ಸಮಾಜಕ್ಕೆ 7.5 ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ಪ್ರಭಾಕರ್ ಎಸ್.ಟಿ ಅವರಿಗೆ ಮನವಿ ಸಲ್ಲಿಸಿದರು.

        ಈ ವೇಳೆ ಪ್ರಧಾನ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ, ಸರ್ಕಾರಿ ನೌಕರರಿಗೆ ಮುಂಬಡ್ತಿ, ಮೀಸಲಾತಿ ಈಗಿರುವ ಶೇ 3 ರಿಂದ 7.5ಕ್ಕೆ ಹೆಚ್ಚಿಸುವುದು ಹಾಗೂ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಹಾಗೂ ನಿಗಮ ಮಂಡಳಿಗಳಿಗೆ ಸಮಾಜದವರನ್ನು ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.

          ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಪ್ಪ ಬೇಡರ್ ಮಾತನಾಡಿ. ರಾಜ್ಯದಲ್ಲಿ ಎಸ್.ಟಿ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

           ನಾಗಪ್ಪ ಸಣ್ಣಮನಿ, ಬಸವಣ್ಣೆಪ್ಪ ನಲವಾಗಲ, ಬಸವರಾಜಪ್ಪ ಬಳ್ಳಾರಿ, ನಾಗೇಶ್ ತಳವಾರ, ಆಂಜನೇಯ.ಡಿ.ಕೆ, ಶಿವಾನಂದ ಬುಳ್ಳಮ್ಮನವರ, ಅಜ್ಜಪ್ಪ ಹುಣಸಿಕಟ್ಟಿ, ಮುದಕಣ್ಣವರ, ರವಿ ತಳವಾರ, ಮೌನೇಶ್ ತಳವಾರ, ಬಸವರಾಜ ಕಡೇಮನಿ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link