ಸರ್ಕಾರ ಉಳಿಸಲು ಸಿದ್ದರಾಮಯ್ಯ ಕೊನೆ ಕಸರತ್ತು

ಬೆಂಗಳೂರು

      ರಾಜ್ಯ ರಾಜಕಾರಣದ ಬೆಳವಣಿಗೆ ದಿನೆ ದಿನೆ ಹೊಸ ರೂಪ ಪಡೆಯುತ್ತಿದೆ.ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತು ಪಡಿಸಲು ಕಾಂಗ್ರೆಸ್-ಜೆಡಿಎಸ್ ಪಾಳ್ಯದಲ್ಲಿ ರಣತಂತ್ರ ರೂಪಿಸಲಾಗುತ್ತಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಗಂಭೀರ ಚರ್ಚೆ ಮಾಡಲಾಗುತ್ತಿದೆ.

      ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ರೊಂದಿಗೆ ಸಿದ್ದರಾಮಯ್ಯ ನಿವಾಸದಲ್ಲಿ ಶಾಸಕರನ್ನು ಸಂಪರ್ಕಿಸಬಹುದೇ ಎಂಬ ಚರ್ಚೆ ನಡೆದಿದೆ.ಅತೃಪ್ತ ಶಾಸಕರಾದ ಎಸ್. ಟಿ. ಸೋಮಶೇಖರ್, ಭೈರತಿ ಬಸವರಾಜ್, ಮುನಿರತ್ನ ಹಾಗೂ ಎಂಟಿಬಿ ನಾಗರಾಜ್ ರಾಜೀನಾಮೆ ಕಾಂಗ್ರೆಸ್ ಪಾಳೆಯದಲ್ಲಿ ಸಾಕಷ್ಟು ಡಿಸ್ಟರ್ಬ್ ಮಾಡಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಇನ್ನೂ ಹಲವಾರು ಶಾಸಕರನ್ನು ಸಂಪರ್ಕಿಸಬಹುದು ಎಂಬ ಲೆಕ್ಕಾಚಾರ ಹಾಕಲಾಗುತ್ತ್ತಿದೆ. ಇನ್ನೊಂದು ಕಡೆ ರಾಜ್ಯಪಾಲರು ವರದಿ ಕೊಟ್ಟಿರುವ ಬಗ್ಗೆ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಮತ್ತು ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡಬಹುದು ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.

      ಇನ್ನು ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಅವರು ಮಾಜಿ ಪ್ರಧಾನಿ ಅವರನ್ನು ಭೇಟಿಯಾಗಿದ್ದಾರೆ.ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಶಾಸಕ ರಾಮಲಿಂಗರೆಡ್ಡಿ ಭೇಟಿ ನೀಡಿದ್ದಾರೆ. ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸುವಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಆಹ್ವಾನಿಸಿದ್ದರು. ಹೀಗಾಗಿ ರಾಮಲಿಂಗಾರೆಡ್ಡಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು.
ಇನ್ನು ಉಭಯ ನಾಯಕರ ಮಧ್ಯಾಹ್ನ ಒಂದು ಗಂಟೆಗೆ ಚರ್ಚೆ ನಡೆಸಿದರು. ಸೋಮವಾರ ವಿಶ್ವಾಸಮತ ಯಾಚನೆ ಸುಲಭವಲ್ಲವೆಂದು ಸಿಎಂಗೆ ಮನವರಿಕೆಯಾಗಿದ್ದು, ಈ ಹಿನ್ನೆಲೆ ಅತೃಪ್ತ ಶಾಸಕರ ಮನವೊಲಿಸುತ್ತಾರೆಯೆ ಅಥವಾ ಬೇರೆ ಮಾರ್ಗ ಅನುಸರಿಸುತ್ತಾರೆಯೇ ಕಾದು ನೋಡಬೇಕು.

      ಇದೇ ವೇಳೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ನನಗೆ ಯಾವುದೇ ಹುದ್ದೆ ಬೇಡ, ಡಿಸಿಎಂ ಹುದ್ದೆಯೂ ಬೇಡ, ಔಪಚಾರಿಕವಾಗಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿದ್ದೆಯಷ್ಟೆ ಎಂದು ಸ್ಪಷ್ಟಪಡಿಸಿದರು.

       ಔಪಚಾರಿಕವಾಗಿ ಭೇಟಿಯಾಗಿದ್ದೆ ಅಷ್ಟೇ, ಅತೃಪ್ತ ಶಾಸಕರ ಮನವೊಲಿಕೆ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನಾನು ರಾಜೀನಾಮೆ ಹಿಂಪಡೆಯುವ ನಿರ್ಧಾರ ಮಾಡಿದಾಗ ಅತೃಪ್ತ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ತಿಳಿಸಿದರು.

       ಅತೃಪ್ತ ಶಾಸಕ ಸೋಮಶೇಖರ್ ಅವರು ನನ್ನ ಬಗ್ಗೆ ಹೇಳಿದ್ದು ನಿಜ. ನಾನು, ಸೋಮಶೇಖರ್ ಹಾಗೂ ವಿಶ್ವನಾಥ್ ಅವರು ಮೂವರೂ ಸೇರಿ ಮಾತನಾಡಿಕೊಂಡು ಯಾವುದೇ ಒತ್ತಡ ಬಂದರೂ, ನಮ್ಮ ರಾಜೀನಾಮೆಯನ್ನು ವಾಪಸ್ ಪಡೆಯಬಾರದು ಎಂಬ ತಿರ್ಮಾನಕ್ಕೆ ಬಂದಿದ್ದೆವು. ಆದರೆ ಅಷ್ಟು ಜನ ಮುಖಂಡರು ಬಂದು ಒತ್ತಡ ಹಾಕಿದ್ದರಿಂದ ರಾಜೀನಾಮೆ ಹಿಂಪಡೆಯಬೇಕಾಯಿತು.
ಭಾನುವಾರ ರಾಜೀನಾಮೆ ವಾಪಸ್ ಪಡೆಯಬೇಕೆಂದು ನಿರ್ಧಾರ ಮಾಡಿದ ನಂತರ ಸೋಮವಾರ, ಮಂಗಳವಾರ ಮಾತನಾಡಲು ಯತ್ನಿಸಿದೆ. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಹೇಳಿದರು.

     ನನಗೆ ಯಾವುದೇ ಹುದ್ದೆ ಬೇಡ, ಡಿಸಿಎಂ ಹುದ್ದೆಯ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಹೀಗಿರುವಾಗ ನನಗೆ ಸಿಗಲು ಹೇಗೆ ಸಾಧ್ಯ? ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಅವರು ನೀಡಿದರೂ ನನಗೆ ಬೇಡ. ಹುದ್ದೆಗಾಗಿ ನಾನು ರಾಜೀನಾಮೆ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link