ಕರವೇ ಲಾಂಛನ ದುರುಪಯೋಗ

ಚಿತ್ರದುರ್ಗ:

        ಕರ್ನಾಟಕ ರಕ್ಷಣಾ ವೇದಿಕೆಯ ಹೆಸರು ಮತ್ತು ಲಾಂಛನವನ್ನು ದುರಪಯೋಗಪಡಿಸಿಕೊಳ್ಳುತ್ತಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಟಿ.ರಮೇಶ್ ಗುರುವಾರ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

         2000 ರಲ್ಲಿ ಸ್ಥಾಪನೆಯಾದ ಕರ್ನಾಟಕ ರಕ್ಷಣಾ ವೇದಿಕೆ ಹದಿನೆಂಟು ವರ್ಷಗಳಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ವೇದಿಕೆಯ ಸದಸ್ಯರಲ್ಲದವರು, ಸದಸ್ಯತ್ವದಿಂದ ಉಚ್ಚಾಟಿಸಲ್ಪಟ್ಟವರು ವೇದಿಕೆಗೆ ಕೆಟ್ಟ ಹೆಸರು ತರುವ ದುರುದ್ದೇಶದಿಂದ ಕರ್ನಾಟಕ ರಕ್ಷಣಾ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವವರ ವಿರುದ್ದ 2006 ರಲ್ಲಿ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಶಾಶ್ವತ ನಿರ್ಬಂಧಕಾಜ್ಞೆಯ ದಾವೆ ಹೂಡಿರುತ್ತಾರೆ.

         ಹೀಗಿದ್ದಾಗಲೂ ಕೆಲವರು ಕರ್ನಾಟಕ ರಕ್ಷಣಾ ವೇದಿಕೆ ಹೆಸರಿನಡಿ ಪ್ರತಿಭಟನೆ, ಚಳುವಳಿ, ಕಾರ್ಯಕ್ರಮಗಳನ್ನು ನಡೆಸಿ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಂಗದ ಆದೇಶವನ್ನು ಉಲ್ಲಂಘಿಸುತ್ತಿದ್ದಾರೆ. ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಟಿ.ರಮೇಶ್ ಜಿಲ್ಲಾ ರಕ್ಷಣಾಧಿಕಾರಿಯನ್ನು ಕೋರಿದರು.

       ಕರವೇ ತಾಲೂಕು ಅಧ್ಯಕ್ಷ ರಾಜಪ್ಪ, ಚಳ್ಳೆಕೆರೆ ತಾಲೂಕು ಅಧ್ಯಕ್ಷ ವೆಂಕಟೇಶ್, ಹೊಸದುರ್ಗ ತಾಲೂಕು ಅಧ್ಯಕ್ಷ ಲೋಕೇಶ್, ಹಿರಿಯೂರು ತಾಲೂಕು ಅಧ್ಯಕ್ಷ ಕೃಷ್ಣಪೂಜಾರ್, ಮೊಳಕಾಲ್ಮುರು ತಾಲೂಕು ಅಧ್ಯಕ್ಷ ನಾಗರಾಜ್, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಕಿರಣ್‍ಕುಮಾರ್, ಚಿತ್ರದುರ್ಗ ನಗರಾಧ್ಯಕ್ಷ ಪಿ.ರಮೇಶ್, ಪ್ರಧಾನ ಸಂಚಾಲಕ ಗಣೇಶ್, ಉಪಾಧ್ಯಕ್ಷ ವೆಂಕಟೇಶ್, ಚಳ್ಳಕೆರೆ ತಾಲೂಕು ಅಧ್ಯಕ್ಷೆ ಜಯಲಕ್ಷ್ಮಿ, ಸಿ.ಎನ್.ಪ್ರಕಾಶ್, ವಿಜಯಲಕ್ಷ್ಮಿ, ಶಾಮು, ವಸಂತ, ಮಲ್ಲಪ್ರಸಾದ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link