ಸೈಬರ್ ಅಪರಾಧವನ್ನು ಗಂಭೀರವಾಗಿ ಪರಿಗಣಿಸಿ : ಕುಮಾರಸ್ವಾಮಿ

ಬೆಂಗಳೂರು

       ಸಾರ್ವಜನಿಕರು ದೂರು ನೀಡಲು ಪೊಲೀಸ್ ಠಾಣೆಗೆ ನಿರ್ಭಿತಿಯಿಂದ ಆಗಮಿಸಿ ದೂರು ನೀಡಲು ಅನುಕೂಲವಾಗುವಂತಹ ವಾತಾವರಣ ಉಂಟು ಮಾಡಲು ಪೊಲೀಸ್ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

       ಸೈಬರ್ ಅಪರಾಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಹಾಕುವವರು ಸಾಮಾಜದ ಸ್ವಾಸ್ಥ್ಯ ಕದಡುವ ಶಕ್ತಿಗಳ ಯತ್ನಗಳಿಗೆ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ ಎಂದರು.

        ಪೊಲೀಸ್ ಠಾಣೆಯನ್ನು ಜನಸ್ನೇಹಿ ಗೊಳಿಸಿ ಲೋಕಸಭಾ ಚುನಾವಣೆಯನ್ನು ಶಾಂತಯುತವಾಗಿ ನಡೆಸಲು ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಅಡ್ಡಿ-ಆತಂಕಗಳು ಎದುರಾಗದಂತೆ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವುದರ ಜೊತೆ ಅಪರಾಧ ಕೃತ್ಯಗಳನ್ನು ಹತ್ತಕ್ಕಲು ಶಕ್ತಿಮೀರಿ ಶ್ರಮಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

        ಪೊಲೀಸ್ ಪ್ರಧಾನ ಕಚೇರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಸ್ಪಿಗಳು ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರಾವಳಿ ಭಾಗದ ಸೇರಿದಂತೆ ಯಾವುದೇ ಭಾಗದಲ್ಲಿ ಕೋಮುಗಲಭೆ ನಡೆಯದಂತೆ ನೋಡಿಕೊಂಡ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದೇನೆ ಎಂದರು.

       ಪೊಲೀಸ್ ಸಿಬ್ಬಂದಿಗೆ ವೇತನ ಪರಿಷ್ಕರಣೆ ಕುರಿತಂದೆ ರಾಘವೇಂದ್ರ ಔರಾದ್‍ಕರ್ ಅವರು ನೀಡಿರುವ ವರದಿಯ ಸಂಬಂಧ ಸದ್ಯದಲ್ಲಿಯೇ ಸಭೆ ಕರದು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

       ಈ ನಡುವೆ ಸಮಾವೇಶದಲ್ಲಿಅಪರಾಧ ಕೃತ್ಯಗಳ ಪ್ರಮಾಣ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿರಬಹುದು. ಆದರೆ ಅದನ್ನೇ ಮುಂದಿಟ್ಟು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಅಪರಾಧ ಪತ್ತೆಗಿಂತ ಅಪರಾಧ ನಡೆಯುವ ಮುನ್ನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡು ಅವುಗಳನ್ನು ತಡೆಯುವುದು ಮುಖ್ಯ.ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದ್ದಾರೆ

       ಸಮ್ಮಿಶ್ರ ಸರ್ಕಾರದ ಆಗುಹೋಗುಗಳ ಬಗ್ಗೆ ಸರ್ಕಾರ ಬೀಳಿಸುವ ಯತ್ನಗಳ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸರ್ಕಾರ ಸುಭದ್ರವಾಗಿದ್ದು, ನಿಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ, ರಾಜ್ಯ ಪೊಲೀಸರಿಗೆ ದೇಶದಲ್ಲಿರುವ ಉತ್ತಮ ಹೆಸರನ್ನು ಉಳಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನ ನಡೆಸಿ ಎಂದು ಸಲಹೆ ನೀಡಿದರು.

       ಕರಾವಳಿ ಭಾಗಗಳು ಸೇರಿದಂತೆ, ಕೆಲ ಕೋಮುಸೂಕ್ಷ್ಮ ಪ್ರದೇಶಗಳಲ್ಲಿ ಕೋಮು ವಿಷಬೀಜ ಬಿತ್ತಿ ರಾಜಕೀಯ ಲಾಭ ಪಡೆಯಲು ಯತ್ನ ನಡೆಸುವ ಶಕ್ತಿಗಳ ವಿರುದ್ಧ ನಿಗಾ ವಹಿಸಿ, ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಅದರಿಂದ ಹೆಚ್ಚಿನ ಅನಾಹುತ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಹೆಚ್ಚಿನ ನಿಗಾ

         ಮಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೂಡಲೇ ರೌಡಿಗಳ ಪೆರೇಡ್ ನಡೆಸಿ, ಭದ್ರತೆಯನ್ನು ಬಿಗಿಗೊಳಿಸಿ, ಶಾಂತಯುತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

     ಸಮಾವೇಶದಲ್ಲಿ ಗೃಹ ಸಚಿವ ಎಂ.ಬಿ. ಪಾಟೀಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು, ಪೊಲೀಸ್ ಮಹಾನಿರ್ದೇಶಕರಾದ ಎಂ.ಎನ್. ರೆಡ್ಡಿ, ಕಿಶೋರ್ ಚಂದ್ರ, ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಸೇರಿ, ಎಲ್ಲಾ ಎಡಿಜಿಪಿಗಳು, ಐಜಿಗಳು, ಜಿಲ್ಲಾ ಎಸ್ಪಿಗಳು, ಐಪಿಎಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap