ಬೆಂಗಳೂರು
ಮನೆ ಬಾಗಿಲು ಮುರಿದು ಹಾಡುಹಗಲೇ ಒಳನುಗ್ಗಿದ ದುಷ್ಕೃರ್ಮಿಗಳು 40 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ಸೇರಿ, ಒಂದೂವರೆ ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿರುವ ದುರ್ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತೀಕೆರೆ ಭೀಮಪ್ಪ ಅವರು ಸೋಮವಾರ ಬೆಳಿಗ್ಗೆ ಮನೆಗೆ ಬೀಗಿ ಹಾಕಿಕೊಂಡು ಫ್ಲೇ ವುಡ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದು. ಅವರಿಗಿಂತ ಮುನ್ನವೇ ಪತ್ನಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದು, ಅವರು ಕೂಡ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬರುವಷ್ಟರಲ್ಲಿ ಮುಂಬಾಗಿಲು ಬೀಗ ಮುರಿದು ಒಳನುಗ್ಗಿದ್ದ ದುಷ್ಕರ್ಮಿಗಳು ಚಿನ್ನದ ಓಲೆ, ಸರ, ಸೇರಿ 40 ಗ್ರಾಂ ಚಿನ್ನ, 600 ಬೆಳ್ಳಿ ವಸ್ತುಗಳು ಇನ್ನಿತರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿರುವುದು ಕಂಡು ಬಂದಿದೆ.ಈ ಸಂಬಂಧ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿ, ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








