ಬೆಂಗಳೂರು 
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಕಡೆ ಮತದಾನ ಜಾಗೃತಿ ಕಾರ್ಯಕ್ರಮಗಳು ಬಿರುಸುಗೊಂಡಿದೆ.
ಹಾಲು ಉತ್ಪನ್ನ ಮಾರಾಟ ಸಂಘಗಳು ಹಾಲಿನ ಪೊಟ್ಟಣಗಳ ಮೇಲೆ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಟಿಕೆಟ್ಗಳ ಮೇಲೆ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಬರಹ ಮುದ್ರಿಸಲಾಗಿದೆ. ಸಾರಿಗೆ ಸಂಸ್ಥೆ ಪ್ರತಿದಿನ 29 ಲಕ್ಷ ಟಿಕೆಟ್ಗಳನ್ನು ಪ್ರಯಾಣಿಕರಿಗೆ ವಿತರಿಸುತ್ತಿದ್ದು, ಇದರ ಮೂಲಕ ಮತದಾನದ ಬಗ್ಗೆ ಜಾಗೃತಿ ಅರಿವು ಮೂಡಿಸಲಾಗುತ್ತಿದೆ.
ರಾಜ್ಯ ತೋಟಗಾರಿಕೆ ಇಲಾಖೆ ಹುಬ್ಬಳ್ಳಿಯಲ್ಲಿಂದು ಹೂಗಳಿಂದಲೇ ಅಲಂಕೃತಗೊಂಡ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್ ಯಂತ್ರಗಳನ್ನು ನಿರ್ಮಿಸುವ ಮೂಲಕ ಮತದಾನದ ಜಾಗೃತಿಗೆ ಹೊಸ ಆಯಾಮ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








