ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ

ಚಿತ್ರದುರ್ಗ:

       ನೆಹರು ಯುವ ಕೇಂದ್ರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮಾತೃಶ್ರಿ ಕಲಾ ಸಾಂಸ್ಕೃತಿಕ ಮತ್ತು ಕ್ರೀಡಾ ಯುವಕರ ಸಂಘ, ಶ್ರೀರಾಮ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು, ಶ್ರೀಮಾತೃಶ್ರೀ ಕೈಗಾರಿಕಾ ತರಬೇತಿ ಕೆಂದ್ರ ಚಿತ್ರದುರ್ಗ ಇವರುಗಳ ಸಹಯೋಗದೊಂದಿಗೆ ಸ್ಟೇಡಿಯಂ ರಸ್ತೆಯಲ್ಲಿರುವ ಶ್ರೀರಾಮ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ತಾಲೂಕು ಮಟ್ಟದ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

       ಸದ್ಗುರು ಕಬೀರಾನಂದಸ್ವಾಮಿ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಸಿ.ಎಲ್.ನಿರಂಜನಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಸಂಸತ್‍ನಲ್ಲಿ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಿಸುವಂತಾಗಬೇಕು. ಸದೃಢ ಭಾರತ ನಿರ್ಮಾಣವಾಗಬೇಕಾದರೆ ಯುವಕ/ಯುವತಿಯರಿಗೆ ರಾಜಕೀಯ ರಂಗದಲ್ಲಿ ಅವಕಾಶ ಸಿಗಬೇಕು. ಶಿಕ್ಷಣದ ಜೊತೆಯಲ್ಲಿಯೇ ರಾಜಕೀಯ ಜ್ಞಾನವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

        ಶ್ರೀಮಾತೃಶ್ರೀ ಕಲಾ ಸಾಂಸ್ಕತಿಕ ಮತ್ತು ಕ್ರೀಡಾ ಯುವಕರ ಸಂಘದ ರಾಜ್ಯಾಧ್ಯಕ್ಷ ವಿ.ಎಲ್.ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀರಾಮ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಿ.ಜಗದೀಶ್, ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಡಿ.ಪ್ರಕಾಶ್, ಉಪನ್ಯಾಸಕಿ ಶೃತಿ, ಜಿ.ವಿ.ಗೌತಮ್ ವೇದಿಕೆಯಲ್ಲಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link