ದಾವಣಗೆರೆ
ಇತ್ತೀಚೆಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಜಗಳೂರು ನಗರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆಯುಷ್ ಇಲಾಖೆ ದಾವಣಗೆರೆ ಇವರುಗಳ ಸಹಯೋಗದಲ್ಲಿ ಜಗಳೂರು ತಾಲ್ಲೂಕಿನಲ್ಲಿ ಬೃಹತ್ ಉಚಿತ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ಜಗಳೂರು ತಾಲ್ಲೂಕಿನ ಸಾರ್ವಜನಿಕರಿಗೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಿರೀಶ್, ಅಂಜಿನಮ್ಮ ಇವರು ಮಾನಸಿಕ ಆರೋಗ್ಯದ ಬಗ್ಗೆ ಮತ್ತು ಮಾನಸಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿದರು.
ದಾವಣಗೆರೆ ಲೋಕಸಭಾ ಸದಸ್ಯರಾದ ಜಿ.ಎಂ.ಸಿದ್ದೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನದ ಬೂತ್ಗೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಗಳೂರು ಶಾಸಕರಾದ ಎಸ್.ವಿ.ರಾಮಚಂದ್ರಪ್ಪ. ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ತ್ರಿಪುಲಾಂಬ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ವೈದ್ಯರಾದ ಡಾ.ಗಂಗಂ ಸಿದ್ದರೆಡ್ಡಿ ಮತ್ತು ಎ.ಪಿ.ಡಿ.ಸಂಸ್ಥೆಯ ಪ್ರಕಾಶ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
