ನೊಂದಾಯಿತ ಕಾರ್ಮಿಕರಿಗೆ ಮಾತ್ರ ಸೌಲಭ್ಯ

ಚಿತ್ರದುರ್ಗ

          ಕಾರ್ಮಿಕರು ತಮ್ಮ ಹೆಸರನ್ನು ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಂಡರೆ ಮಾತ್ರ ವಿವಿಧ ಸೌಲಬ್ಯಗಳನ್ನು ಪಡೆಯಲು ಅರ್ಹರಾಗುತ್ತಾರೆ ಎಂದು ಅಸಂಘಟಿತ ಕಾರ್ಮಿಕರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ.ವಸ್ತ್ರಮಠ ಕರೆ ನೀಡಿದರು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಆರೋಗ್ಯ ಮತ್ತು ಕು.ಕ. ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಕೀಲರ ಸಂಘ, ಚಿತ್ರದುರ್ಗ ಇವರ ಸಹಯೋಗದಲ್ಲಿ ತ.ರಾ.ಸು. ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಆಶಾ, ಅಂಗನವಾಡಿ ಕಾರ್ಯಕರ್ತೆ, ಕಟ್ಟಡ ಕಾರ್ಮಿಕರಿಗೆ ಬಾಲ್ಯಾವಸ್ಥೆ, ಕಿಶೋರಾವಸ್ಥೆ, ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

         ಸರ್ಕಾರ ನಿಮಗಳ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ ಅದರ ಸದುಪಯೋಗ ಪಡೆಯಲು ಸದಸ್ಯರಾಗುವುದು ಅನಿವಾರ್ಯ ಇದು ಸಹಾ ಕಡಿಮೆ ಶುಲ್ಕದೊಂದಿಗೆ ಸತತವಾಗಿ ಮೂರು ವó ಸದಸ್ಯರಾದರೆ ಮಾತ್ರ ಸರ್ಕಾರದ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಿರಾ ಎಂದ ನ್ಯಾಯಾಧೀಶರು, ಪ್ರತಿಯೊಂದು ಕಟ್ಟಡವನ್ನು ನಿರ್ಮಾಣ ಮಾಡುವಾಗ ಅದರಿಂದ ಇಂತಿಷ್ಟು ಪ್ರಮಾಣದಲ್ಲಿ ಸೆಸ್ ಮೂಲಕ ಹಣವನ್ನು ವಸೂಲಿ ಮಾಡಲಾಗುತ್ತಿದೆ ಇದನ್ನು ಸದಸ್ಯರಾದವರಿಗೆ ಕಷ್ಟ ಮತ್ತು ಸುಖದ ಕಾಲದಲ್ಲಿಯೂ ಸಹಾ ನೀಡಲಾಗುತ್ತದೆ ಎಂದು ತಿಳಿಸಿದರು.

         ಈ ಯೋಜನೆಯಡಿ ಮಗು ಹುಟ್ಟುವಾಗಲೂ ಹುಟ್ಟಿದ ಮೇಲೂ, ಶಿಕ್ಷಣ ಮದುವೆ ಸೇರಿದಂತೆ ಇತರೆ ಖರ್ಚುಗಳಿಗೆ ಸರ್ಕಾರ ಸಹಾಯ ಮಾಡಲಿದೆ. ಇದೇ ರೀತಿ ಏನಾದರೂ ಅನಾಹುತ ಆದಾಗಲೂ ಸಹಾ ಸಹಾಯವನ್ನು ಪಡೆಯಬಹುದಾಗಿದೆ. ಒಂದು ಕಟ್ಟಡವನ್ನು ನಿರ್ಮಾಣ ಮಾಡುವ ಎಲ್ಲಾ ಕಾರ್ಮಿಕರು ಸಹಾ ಇದರ ಲಾಭವನ್ನು ಅವರು ಮತ್ತು ಅವರ ಕುಟುಂಬದವರು ಪಡೆಯಬಹುದಾಗಿದೆ ಕಾರ್ಮಿಕ ಇಲಾಖೆಯವರು ಸಹಾ ಇದರ ಬಗ್ಗೆ ಸರಿಯಾದ ರೀತಿಯಲ್ಲಿ ಪ್ರಚಾರವನ್ನು ಮಾಡುವುದರ ಮೂಲಕ ಹೆಚ್ಚಿನ ರೀತಿಯಲ್ಲಿ ಸದಸ್ಯರಾಗುವಂತೆ ಮಾಡಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿದರು.

         ನಗರದ ಎಷ್ಟೋ ಆಟೋ ಚಾಲಕರಿಗೆ ವಾಹನ ಚಾಲನೆ ಪರವಾನಿಗೆ ಇಲ್ಲ ಇದರಿಂದ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್.ಎಲ್,ಆರ್ ಮಾಡಿಸಲು ತೀರ್ಮಾನಿಸಲಾಗಿದೆ 8ನೇ ತರಗತಿ ಪಾಸ ಆದವರು ಪ್ರಾಧಿಕಾರದಲ್ಲಿ ಅರ್ಜಿಯನ್ನು ಸಲ್ಲಿಸಿ ನಿಗಧಿತವಾದ ಶುಲ್ಕವನ್ನು ಪಾವತಿ ಮಾಡುವುದರ ಮೂಲಕ ಪಡೆಯಬಹುದಾಗಿದೆ, 8ನೇ ತರಗತಿ ಪಾಸಾಗದಿದ್ದವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಯಲ್ಲಿ ಮಾತನಾಡಿದ್ದೇನೆ ಅವರು ಸಹಾ ಸಹಕಾರ ನೀಡುವುದಾಗಿ ತಿಳಿಸಿದ್ಧಾರೆ ಎಂದರು.

         ಜಿಲ್ಲಾಧಿಕಾರಿ ವಿನೋತ್‍ಪ್ರಿಯ ಅಧ್ಯಕ್ಷತೆ ವಹಿಸಿದ್ದರು, ಪ್ರಾಧಿಕಾರದ ಸದಸ್ಯ ಕಾರ್ಯದರ್ಶೀ ನ್ಯಾಯಾಧೀಶರಾದ ದಿಂಡಲಕೂಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಎನ್.ರಮೇಶ್, , ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಬಾಕರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳ ಮದುವೆಗೆ ಧನ ಸಹಾಯ ಮತ್ತು ಕಾರ್ಮಿಕರಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap