ಬೆಂಗಳೂರು
ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸಾಬೀತಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ನಾಲ್ವರು ಶಾಸಕರು ಬರಲಿಲ್ಲ. ಇನ್ನೂ ಹಲವಾರು ಶಾಸಕರು ಬಸ್ ಹತ್ತದೆಯೇ ಓಡಿಹೋದರು ಹೋದರು ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಸರ್ಕಾರದ ವಿರುದ್ಧ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರೆಸಾರ್ಟ್ ರಾಜಕಾರಣಕ್ಕೆ ಮುಂದಾದಾಗ ಕಾಂಗ್ರೆಸ್ ಶಾಸಕರ ಮಧ್ಯೆ ಮಾರಾಮಾರಿ ನಡೆದಿದೆ. ದೇವರ ದಯೆಯಿಂದ ರೆಸಾರ್ಟ್ ನಲ್ಲಿ ಕೊಲೆ ಆಗಲಿಲ್ಲ. ಮುಖ್ಯಮಂತ್ರಿ
ಕುಮಾರಸ್ವಾಮಿ ಅವರೇ ತಮ್ಮನ್ನು ತಾವು ಎರಡನೆಯ ದರ್ಜೆ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಕುಮಾರಸ್ವಾಮಿ ಅವರನ್ನು ಕಾಂಗ್ರೆಸಿನವರು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ನಂಬಿಕೊಂಡು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಸೂಕ್ತವಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳುವುದು ಸೂಕ್ತ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








