ಹಾವೇರಿ:
ಜಿಲ್ಲೆಯಲ್ಲಿ ಈ ವರ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡು ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಕೆರೆ-ಕಟ್ಟೆಗಳ ಅಭಿವೃದ್ಧಿಗೆ ಜಿಲ್ಲಾ ಪಂಚಾಯತಿ ಮುಂದಾಗಿದೆ. ಜಿಲ್ಲೆಯು ಪದೇ ಪದೇ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಜನ, ಜನಾವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲದ ಮೂಲಗಳು ಕಡಿಯಾಗುತ್ತಿದ್ದು , ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ
ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗ ಅರಸಿಕೊಂಡು ನಗರ, ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ ಈ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ಬಳಸಿಕೊಳ್ಳಲಾಗುತ್ತದೆ ಎಂದು ಹೊಸಕಿತ್ತೂರು ಗ್ರಾಮ ಪಂಚಾಯತಿಯ ಬೈಲಮಾದಪುರ ರಸ್ತೆಯಲ್ಲಿರುವ ಹೊಸಕಿತ್ತೂರು ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯನ್ನು ವಿಕ್ಷೀಸಿ ಕೂಲಿ ಕಾರರನ್ನುದ್ದೇಶಿ ಶ್ರೀಮತಿ ಕೆ.ಲಿಲಾವತಿ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ, ಹಾವೇರಿರವರು ಮಾತನಾಡಿದರು. ಹಾಗೇಯೆ ಕೂಲಿಕಾರರಗೆ ರೋಜಗಾರ್ ದಿನಾಚರಣೆಯನ್ನು ಆಚರಿಸಿ ಉದ್ಯೋಗ ಚೀಟಿಯನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿತರಿಸಿದರು.
ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕ ಪಂಚಾಯತ್, ಹಾವೇರಿ ಇವರು ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ವಲಸೆ ತಪ್ಪಿಸಿಲು ತಾಲೂಕಿನಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳುವುದು ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನೀರು ನಿಲ್ಲುವಂತೆ ಮಾಡುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ಈ ವರ್ಷ ತಾಲೂಕಿನಲ್ಲಿ ನೈಸರ್ಗಿಕ ಜಲ ಸಂರಕ್ಷಣೆಗೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಿದ್ದು, ಇದರಿಂದ ಎರಡು ಬಗೆಯ ಪ್ರಯೋಜನ ಆಗಲಿದೆ.
ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಒಂದಡೆಯಾದರೆ ಮತ್ತೊಂದಡೆ ಹೆಚ್ಚ ಜನರಿಗೆ ಉದ್ಯೋಗ ಖಾತರಿಯಡಿ ಕೂಲಿ ಕೆಲಸ ಕೊಟ್ಟಂತಾಗಲಿದೆ. ಅಲ್ಲದೇ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ. ಎಂದರು ಹಾಗೇಯೇ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕ ಪಂಚಾಯತ ಬದ್ಧವಾಗಿ ಇದ್ದು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲಗೋಳ್ಳುವಂತಹ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ.
ಮತ್ತು ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು, ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿಯ ಸಹಾಯಕ ನಿರ್ದೇಶಕರು(ಗ್ರಾ.ಉ) ಶ್ರೀ ಟಿ.ಆರ್. ಮಲ್ಲಾಡದ್, ಜಿಲ್ಲಾ ಪಂಚಾಯತ ಎ.ಡಿ.ಪಿ.ಸಿ ಸರ್ ಶ್ರೀ ಮಹಾಂತೆಶ ನರೆಗಲ್ಲ, ದೀಪಕ್ ನಾಯ್ಕ್, ತಾಲೂಕ ಐ.ಇ,ಸಿ ಸಂಯೋಜಕರು ಶ್ರೀ ಗಿರೀಶ ಬೆನ್ನೂರು ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.