ಬೆಂಗಳೂರು
ಅಕ್ರಮ ಅದಿರು ನಿಕ್ಷೇಪಗಳ ಸಾಗಾಣಿಕೆ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ದೋಷಾರೋಪಣಾ ಪಟ್ಟಿ ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಲ್ಲಿಂದು ಅವರು ವಾಪಸ್ ಪಡೆದಿದ್ದಾರೆ.
ನ್ಯಾಯಮೂರ್ತಿ ಜಾನ್ ಮೈಖೆಲ್ ಡಿ ಕುನ್ಹ ಅವರಿದ್ದ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಾಗ, ರೆಡ್ಡಿ ಪರ ವಕೀಲರು ಅರ್ಜಿ ವಾಪಸ್ ಪಡೆಯುವುದಾಗಿ ಮನವಿ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಅವರು ಅರ್ಜಿಯನ್ನು ವಜಾಗೊಳಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನೀಡಿದ್ದ ವರದಿ ಆಧಾರದ ಮೇಲೆ ಸುಪ್ರಿಂ ಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಅದರಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ರೆಡ್ಡಿ ವಿಚಾರಣೆಗೆ ತಡೆ ನೀಡುವಂತೆ ಹೈ ಕೋರ್ಟ್ ಗೆ ಮನವಿ ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
