ರೋಷನ್ ಬೇಗ್ ಗೆ ಕಾಂಗ್ರೆಸ್ ನೋಟಿಸ್..!!

ಬೆಂಗಳೂರು

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ , ಕರ್ನಾಟಕ ಪ್ರದೇಶ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಪಕ್ಷ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಗೆ ಪ್ರದೇಶ ಕಾಂಗ್ರೆಸ್ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದೆ.

       ಪಕ್ಷಕ್ಕೆ ಮುಜಗರವಾಗುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸುವ ಮೂಲಕ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿ ನಡೆದುಕೊಂಡಿದ್ದೀರಿ. ತಮ್ಮ ಹೇಳಿಕೆಯಿಂದ ಪಕ್ಷದ ಘನತೆ-ಗೌರವಕ್ಕೆ ಕುಂದುಂಟಾಗಿದೆ. ತಮ್ಮ ಹೇಳಿಕೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸುತ್ತೇವೆ. ತಮ್ಮ ವಿರುದ್ದ ಏಕೆ ಶಿಸ್ತು ಕ್ರಮ ಜರುಗಿಸಬಾರದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ ವೈ ಘೋರ್ಪಡೆ ನೋಟೀಸ್ ನಲ್ಲಿ ಪ್ರಶ್ನಿಸಿದ್ದಾರೆ.

      ಅಲ್ಲದೆ ನೊಟೀಸಿಗೆ 7 ದಿನಗಳ ಒಳಗಾಗಿ ಉತ್ತರಿಸದಿದ್ದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನೊಟೀಸಿನಲ್ಲಿ ಎಚ್ಚರಿಸಿದ್ದಾರೆ.ಇಂದು ನೊಟೀಸ್ ಜಾರಿ ಮಾಡಲಾಗಿತ್ತು ಸೂಕ್ತ ಹಾಗು ಸಮಂಜಸ ಉತ್ತರ ನೀಡದಿದ್ದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಲ್ಲಿ ಅಮಾನತ್ತು ಅಥವಾ ಉಚ್ಛಾಟನೆಯನ್ನು ಮಾಡುವ ಎಚ್ಚರಿಕೆ ನೀಡಲಾಗಿದೆ.

      ಇಂದು ಮಾಧ್ಯಮಗಳಿಗೆ ಮಾಜಿ ಸಚಿವ ರೋಷನ್ ಬೇಗ್ ಹೇಳಿಕೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸ್ಥಿತಿಗೆ ಇಂದಿನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ. ಮತಗಟ್ಟೆ ಸಮೀಕ್ಷೆಯಲ್ಲಿನ ವರದಿಗಳನ್ನು ನೋಡಿದರೆ ಕಾಂಗ್ರೆಸ್ ಅಧೋಗತಿಗೆ ಇಳಿಯುತ್ತಿದೆ ಎಂಬ ಸೂಚನೆ ಕಂಡುಬರುತ್ತಿದೆ.

       ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರನ್ನು ಕಡೆಗಣಿಸಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹೊರಟಿದ್ದು, ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುವ ಮೂಲಕ ಮತಗಳ ಧೃವೀಕರಣವಾಗಲು ಆಸ್ಪದ ಮಾಡಿಕೊಟ್ಟಿದ್ದೇ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವೆಂದು ಹೇಳಿಕೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿಲು ದಿನೇಶ್ ಗುಂಡೂರಾವ್ ಅಸಮರ್ಥ . ಹಾಗಾಗಿ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap