ಬೆಳಗಾವಿ
1-12ನೇ ತರಗತಿಯವರೆಗೆ ಒಂದೆಡೆ ಗುಣಮಟ್ಟದ ಶಿಕ್ಷಣ ಒದಗಿಸಲು ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸುವ ಬಗ್ಗೆ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಡಾ.ಉಮೇಶ್.ಜಿ.ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಳೆದ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ 176 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಗ್ರಾ.ಪಂ.ಕೇಂದ್ರ ಸ್ಥಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿದಂತೆ 100 ಇಂತಹ ಶಾಲೆಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುತ್ತದೆ. ಒಂದೇ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರಿ ಪ್ರಾಥಮಿಕ ,ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳನ್ನು ಸಂಯೋಜಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.ಈ ರೀತಿಯ ಪಬ್ಲಿಕ್ ಶಾಲೆ ಪ್ರಾರಂಭಿಸಲು ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಒಂದೇ ಆವರಣ ಹಾಗೂ ಒಂದೇ ಹಳ್ಳಿಯ ವ್ಯಾಪ್ತಿಯಲ್ಲಿರಬೇಕು ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ