ಬೆಂಗಳೂರು:

ಇತ್ತೀಚೆಗೆ ನಡೆದ ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ರಾಜಕೀಯ ವಿಶ್ಲೇಷಕಿ ಸೋನಂ ಮಹಾಜನ್ ಅವರು ದಕ್ಷಿಣ ಭಾರತದ ಪ್ರಸಿದ್ಧ ದೃಶ್ಯ ಮಾಧ್ಯಮ ಸಂಸ್ಥೆ ಏಷ್ಯಾನೆಟ್ ಗ್ರೂಪ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಿನವ್ ಖರೆ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಮಹಾಜನ್ ತಾಬ್ವು ಖರೆ ವಿರುದ್ಧ ದೂರು ನೀಡಿದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ ಕಳೆದ ವರ್ಷ ತಾನು ಅವರ ಸಂಸ್ಥೆಯಲ್ಲಿ ಕೆಲಸ ಮಾಡುವ ವೇಳೆ ಆವರು ತನಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಈ ಪ್ರಕರಣ ಸಂಬಂಧ ಬೆಂಗಳೂರು ದಕ್ಷಿಣದ ಡಿಸಿಪಿ ಅಣ್ಣಾಮಲೈ ಅಭಿನವ್ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಖಚಿತ ಪಡಿಸಿದ್ದಾರೆ ಆದರೆ ಇನ್ನೂ ಕಾನೂನು ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ.”. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾವು ಖರೆ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಮ್ಯಾಜಿಸ್ಟ್ರೇಟ್ ಮುಂದೆ 164 ಸಿಆರ್ಪಿಸಿ ಹೇಳಿಕೆಗಾಗಿ ನಾವು ಕಾಯುತ್ತಿದ್ದೇವೆ.ಸೋನಮ್ ಸದ್ಯ ಅನಾರೋಗ್ಯಕ್ಕೀಡಾಗಿದ್ದು ಆಕೆ ಒಮ್ಮೆ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಮೇಲೆ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಅಣ್ಣಾಮಲೈ ಸ್ಪಷ್ಠ ಪಡಿಸಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
