ಶಿವಮೊಗ್ಗ
ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆ ಇಂದು ಬೈಂದೂರು ಕ್ಷೇತ್ರದ ರೋಟರಿ ಭವನದಲ್ಲಿ ನಡೆಯಿತು. ಕಾಂಗ್ರೆಸ್ -ಜೆ.ಡಿ.ಎಸ್ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಚುಣಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಮೈತ್ರಿ ಸರಕಾರ ಜನಪರವಾಗಿ, ರೈತರ ಪರವಾಗಿ ಕೆಲಸ ಮಾಡುತ್ತಿದೆ . ರೈತರ ಸಾಲ ಮನ್ನಾ ಮಾಡಿ ರೈತರಿಗೆ ಬೆಂಬಲವಾಗಿ ನಿಂತಿದೆ ಎಂದರು. ಕೇಂದ್ರ ಸರಕಾರದ ಜನಪರ ಯೋಜನೆಗಳೇ ಇಲ್ಲ, , ಪ್ರತಿ ನಿತ್ಯ ತೈಲ ಬೆಲೆ ಏರಿಕೆಯೇ ಕೇಂದ್ರದ ಸಾಧನೆಯಾಗಿದೆ ಎಂದು ಟೀಕಿಸಿದರು. ಈ ಹಿನ್ನೆಲೆಯಲ್ಲಿ ಜನತೆ ಜನಪರವಾಗಿರುವ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪನವರನ್ನು ಗೆಲ್ಲಿಸುವಂತೆ ವಿನಂತಿ ಮಾಡಿದರು.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು ಉಪ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪನವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಹಾಗೂ ಜೆ.ಡಿ.ಎಸ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








