ಬೆಂಗಳೂರು
ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಉಳಿದಂತೆ ಕರಾವಳಿ, ಒಳನಾಡಿನ ಹಲವೆಡೆ ಮಳೆಯಾಗಿದೆ. ಮಂಗಳೂರು, ಪಣಬೂರು 3, ಕಾರ್ಕಳ ಮತ್ತು ಕೊಲ್ಲೂರಿನಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಕಲಬುರಗಿಯಲ್ಲಿ ದಿನದ ಗರಿಷ್ಠ ತಾಪಮಾನ 36 ಹಾಗೂ ಬೀದರ್‍ನಲ್ಲಿ ಕನಿಷ್ಠ 16.6 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ.
ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ ಆಗಾಗ ತುಂತುರು ಮಳೆ, ಗರಿಷ್ಠ 30 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಷಿಯಸ್ ತಾಪಮಾನ ಸಂಭವವಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








