ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಚುರುಕುಗೊಳಿಸಲು ಶಾಸಕರ ಕಟ್ಟುನಿಟ್ಟಿನ ಸೂಚನೆ

ಚಳ್ಳಕೆರೆ

     ನಗರದ ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಬಸ್ ಕಾಮಗಾರಿಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಶಾಸಕ ಟಿ.ರಘುಮೂರ್ತಿ ಪೌರಾಯುಕ್ತ ಜೆ.ಟಿ.ಹನುಮಂತರಾಜುರವರಿಗೆ ಸೂಚಿಸಿದರು.

     ಇಲ್ಲಿನ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಪ್ರಾರಂಭವಾಗಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ಉಳಿದ ನಾಲ್ಕು ತಿಂಗಳಲ್ಲಿ ಬಸ್ ನಿಲ್ದಾಣ ಪ್ರಾರಂಭವಾಗಬೇಕಿದೆ. ಆದರೆ, ಇನ್ನೂ ಶೆಲ್ಲರ್ ಕಾಮಗಾರಿ ಸಹ ಪೂರ್ಣವಾಗಿಲ್ಲ. ಸಂಬಂಧಪಟ್ಟ ಗುತ್ತಿಗೆದಾರರನ್ನು ಕರೆಸಿ ಕಾಮಗಾರಿಯನ್ನು ನಿಗದಿತ ಅವಧಿಯಲ್ಲೇ ಪೂರ್ಣಗೊಳಿಸುವಂತೆ ನಿರ್ದೇಶನ ನೀಡುವಂತೆ ಶಾಸಕರು ತಿಳಿಸಿದರು.

     ಪೌರಾಯುಕ್ತ ಜೆ.ಟಿ.ಹನುಮಂತರಾಜು ಮಾಹಿತಿ ನೀಡಿ ಶೆಲ್ಲರ್ ಕಾಮಗಾರಿ ಪ್ರಗತಿಯಲ್ಲಿದ್ದು, ಮೊದಲ ಮಹಡಿಯ ಕಾಮಗಾರಿ ಪ್ರಾರಂಭಿಸಿದಾಗಿ ಗುತ್ತಿಗೆದಾರರು ಪ್ರಾರಂಭಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದವಾರ ಮಳೆ ಬಂದು ಗುಂಡಿಯಲ್ಲಿ ನೀರು ನಿಂತಿದ್ದು ಕಾಮಗಾರಿ ವಿಳಂಬವಾಗಲು ಕಾರಣವಾಗಿದೆ. ಈಗಾಗಲೇ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವಿನಯ್, ಸಹಾಯಕ ಇಂಜಿನಿಯರ್ ಲೋಕೇಶ್ ಪ್ರತಿನಿತ್ಯ ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆಂದರು.

     ಪತ್ರಿಕೆಯೊಂದಿಗೆ ಮಾತನಾಡಿದ ಶಾಸಕ ಟಿ.ರಘುಮೂರ್ತಿ ಪ್ರಾರಂಭದ ಹಂತದಲ್ಲಿ ಕೆಳ ಭಾಗದಲ್ಲಿ ವಾಹನಗಳ ನಿಲುಗಡೆಗೆ ಶೆಲ್ಲರ್, ಮೊದಲ ಮಹಡಿಯಲ್ಲಿ ಮಳಿಗೆಗಳ ಜೊತೆಗೆ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು ನಂತರ ಅದರ ಮೇಲ್ಭಾಗದಲ್ಲಿ ಮತ್ತಷ್ಟು ಕೊಠಡಿಗಳನ್ನು ನಿರ್ಮಿಸಲು 3.25 ಕೋಟಿ ಹಣವನ್ನು ಮೀಸಲಿಟ್ಟಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಬಿ.ಟಿ.ರಮೇಶ್‍ಗೌಡ, ಎಂ.ಮಲ್ಲಿಕಾರ್ಜುನ, ಎಂ.ಜೆ.ರಾಘವೇಂದ್ರ, ಪಕ್ಷದ ಮುಖಂಡರಾದ ಆರ್.ಪ್ರಸನ್ನಕುಮಾರ್, ಫರೀದ್‍ಖಾನ್, ಬಡಗಿ ಪಾಪಣ್ಣ, ಪಾಲಯ್ಯ ಮುಂತಾದವರು ಉಪಸ್ಥಿತರಿದ್ದರು.

             ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link