ಟಿಪ್ಪು ಜಯಂತಿ:ಶಾಂತಿ ಕದಡುವರ ಮೇಲೆ ಕಠಿಣ ಕ್ರಮ

ಬೆಂಗಳೂರು

        ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಶಾಂತಿ ಕದಡುವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಇಂದಿಲ್ಲಿ ಬಿಜೆಪಿ ಮುಖಂಡರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

         ಯಾರೇ ವಿರೋಧ ವ್ಯಕ್ತಪಡಿಸಿದರೂ ಪ್ರತಿ ವರ್ಷದಂತೆ ಈ ವರ್ಷವೂ ಸರಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಮಾಡಲಾಗುವುದು . ಬಿಜೆಪಿ ಅವರು ಅನಗತ್ಯವಾಗಿ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವಿನ ಜಯಂತಿಯನ್ನು ಸರಕಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಆಚರಣೆ ಮಾಡಲಿದ್ದೇವೆ ಎಂದರು.

        ನಗರದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಅನಂತಕುಮಾರ್ ಹೆಗಡೆ ಪತ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,ಪ್ರೋಟೋಕಾಲ್ ಪ್ರಕಾರ ಅವರ ಹೆಸರು ಹಾಕಲಾಗಿದೆ. ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು.

       ಚಿದಾನಂದ ಮೂರ್ತಿ ಅವರ ಬಗ್ಗೆ ಅಪಾರ ಗೌರವವಿದೆ. ಪ್ರತಿಯೊಬ್ಬರಿಗೂ ವಾಕ್‍ಸ್ವಾತಂತ್ರ್ಯವಿದ್ದು, ಅದರಂತೆ ಅವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಟಿಪ್ಪು ಆಚರಣೆ ವಿಚಾರ ಹಿಂದಿಯೇ ತೀರ್ಮಾನವಾದ್ದರಿಂದ ಅದರಂತೆಯೇ ಮಾಡಲಿದ್ದೇವೆ ಎಂದರು.

      ಬಿಜೆಪಿಅವರು ಟಿಪ್ಪು ವಿಚಾರ ಇಟ್ಟುಕೊಂಡುಕೋಮು ಸೌಹಾರ್ದ ಕದಡುವ ಕೆಲಸಮಾಡುತ್ತಿದ್ದಾರೆ. ಇದಕ್ಕೆ ಸರಕಾರ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

      ಆದರೆ, ಕಾನೂನು ಸುವ್ಯವಸ್ಥೆಗೆ ಯಾರೇ ದಕ್ಕೆ ತಂದರೂ ಸಹಿಸುವುದಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಪೆÇಲೀಸ್ ಬಂದೊಬಸ್ತ್ ಮಾಡಲಾಗುವುದು. ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲಲುವ ಸಂಬಂಧ ಸೋಮವಾರ ಪೊಲೀಸ್ ವರಿಷ್ಠರ ಜೊತೆ ಸಭೆ ನಡೆಸಲಾಗುವುದು. ಕಾನೂನು ಸುವ್ಯವಸ್ಥೆ ಕಾಪಾಡಲು ಕೆಎಸ್‍ಆರ್‍ಪಿ ಮತ್ತು ಸಿಆರ್‍ಪಿಎಸ್ ಅನ್ನು ಅವರನ್ನ ಬಳಸಿಕೊಳ್ಳಲಾಗುವುದು ಎಂದರು.

      ಬಿಜೆಪಿ ಅವರು 2019 ಲೋಕಸಭಾ ಹಿನ್ನೆಲೆಯಲ್ಲಿ ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಆಕ್ಷೇಪ ವ್ಯಕ್ತಪಡಿಸಿದೆ .ಉಪಚುನಾವಣೆಯ ಐದಕ್ಕೆ ಐದು ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ಭರವಸೆ ಇದೆ. ಹಣದ ಆಮಿಷೆ ಮತ್ತು ಆಪರೇಷನ್ ಕಮಲದ ಬಗ್ಗೆ ಬಿಜೆಪಿ ನಾಯಕರು ನುರಿತರು.ಲಿಂಗಪ್ಪ ಮಗ ತಪ್ಪು ಅರಿತುಕೊಂಡು ವಾಪಸ್ ಬಂದಿದ್ದಾರೆ. ಅವರಿಗೆ ಯಾವುದೇ ಹಣದ ಆಮಿಷ ಒಡ್ಡಿಲ್ಲ ಎಂದರು.

         ಉಪಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ಮಾಡಲಾಗುವುದು. ನಿಗಮ ಮಂಡಳಿಗೆ ಆದಷ್ಟು ಶಾಸಕರನ್ನೇ ನೇಮಕ ಮಾಡಲಾಗುವುದು. .

         ನಾನು ದೆಹಲಿಗೆ ಹೋಗುವುದಿಲ್ಲ. ಆದರೆ ಸಚಿವ .ಕೆ. ಶಿವಕುಮಾರ್ ಯಾಕೆ ಹೋಗಿದ್ದಾರೆ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಯಿಸಿದರು.

        ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸುವ ವಿಚಾರದಲ್ಲಿ ಸುಪ್ರಿಂಕೋರ್ಟ್ ಆದೇಶವನ್ನು ಪಾಲಿಸಲಿದ್ದೇವೆ. ಈ ಸಂಬಂಧ ದೆಹಲಿ ಮಾದರಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಪರಿಸರ ಮಾಲಿನ್ಯದ ದೃಷ್ಟಿಯಿಂದ ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ 8 ರಿಂದ 10 ವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂದರು.

      ದೆಹಲಿ ಮಾದರಿಯಂತೆಯೇ ರಾಜ್ಯ ಸರ್ಕಾರವು ಕೂಡ ಈ ದಿಶೆಯಲ್ಲಿ ಕ್ರಮ ತೆಗೆದುಕೊಂಡಿದೆ. ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಮಯದಲ್ಲಿ ಪಟಾಕಿ ಹೊಡೆಯಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

       ಬೆಳಕಿನ ಹಬ್ಬ ದೀಪಾವಳಿ ರಾಜ್ಯದ ಜನತೆಗೆ ಸುಖ-ಶಾಂತಿ-ನೆಮ್ಮದಿ ನೀಡುವಂತಾಗಲಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಶುಭಕೋರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link