ಬೆಂಗಳೂರು
ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಮುಂಬಡ್ತಿ ಕಾನೂನನ್ನು ಅಕ್ಟೋಬರ್ 12ರ ನಂತರ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು ಇದೇ 12 ರಂದು ಸುಪ್ರೀಂ ಕೋರ್ಟ್‍ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ವಿಚಾರಣೆ ನೋಡಿಕೊಂಡು ನಂತರ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ನೌಕರರ ಹಿತಕಾಪಾಡಲು ಸರ್ಕಾರ ಬದ್ಧವಾಗಿದೆ. 12 ರಂದು ಈ ಕುರಿತು ಸುಪ್ರೀಂ ಕೋರ್ಟ್‍ನಲ್ಲಿ ಮಹತ್ವದ ತೀರ್ಪು ಹೊರಬರುವ ನಿರೀಕ್ಷೆಯಿದೆ. ತರುವಾಯ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
