ವಾಹನ ಚಾಲಕರಿಗೆ ಸೌಲಭ್ಯ ಕೋರಿ 25ರಂದು ಜಿಲ್ಲಾಧಿಕಾರಿಯವರಿಗೆ ಮನವಿ

ಹಿರಿಯೂರು:

        ಕರ್ನಾಟಕ ರಾಜ್ಯ ಖಾಸಗಿ ಲಘುವಾಹನ ಚಾಲಕರ ಸಂಘ ಬೆಂಗಳೂರು ರಾಜ್ಯಾಧ್ಯಕ್ಷರ ಆದೇಶದ ಮೇರಗೆ ಲಘು ವಾಹನ ಚಾಲಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗಿದ್ದು ಸದರಿ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಇದೇ 25ರಂದು ಜಿಲ್ಲಾಧಿಕಾರಿಯವರಿಗೆ ಮನವಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಅರುಣ್‍ಕುಮಾರ್ ಹೇಳಿದರು.

           ಹಿರಿಯೂರಿನಲ್ಲಿ ನಡೆದ ಸಂಘದ ಸದಸ್ಯರ ಸಭೆಯಲ್ಲಿ ಸುತ್ತೋಲೆ ಪತ್ರವನ್ನು ನೀಡಿ ಅವರು ಮಾತನಾಡಿದರು.ಹಿರಿಯೂರು ಲಘು ವಾಹನ ಚಾಲಕರ ಸಂಘದ ಉಪಾಧ್ಯಕ್ಷರಾದ ತಿರುಪತಿ ದಾದು ಹಾಗೂ ಕಾರ್ಯದರ್ಶಿ ಗಿರೀಶ್ ರವರು ಮಾತನಾಡುತ್ತಾ ವಾಹನ ಚಾಲಕರಿಗೆ ಸರ್ಕಾರ ಯಾವುದೇ ಸೌಲಭ್ಯ ನೀಡಿಲ್ಲ ಆರ್ಥಿಕವಾಗಿ ನಾವು ಹಿಂದುಳಿದಿದ್ದೇವೆ ಪ್ರಾಣಾಪಾಯದಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ ಸರ್ಕಾರದ ಎಲ್ಲಾ ಸೌಲಭ್ಯಗಳಿಂದ ನಾವು ವಂಚಿತರಾಗಿದ್ದೇವೆ. ಅದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.

          ಇದೇ 25ರ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಲಘು ವಾಹನ ಚಾಲಕರು ಮತ್ತು ಮಾಲೀಕರು ಕನಕ ಸರ್ಕಲ್ ಹೊಳಲ್ಕೆರೆ ರಸ್ತೆಯಿಂದ ಜಿಲ್ಲಾಧಿಕಾರಿಯವರ ಕಛೇರಿವರೆಗೆ ವಾಹನ ಸಮೇತ ಭಾಗವಹಿಸಿ ಜಿಲ್ಲಾಧಿಕಾರಿ ಕಾರ್ಯಲಯಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

       ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಗೌರವ ಅಧ್ಯಕ್ಷರಾದ ಜಯರಾಮಪ್ಪ, ಕಾರ್ಯದರ್ಶಿ ರಾಜಣ್ಣ, ನಿರ್ದೇಶಕರಾದ ಮೋಹನ್, ಬಸವರಾಜ್ ಕಾಂತರಾಜ್, ಸುಮನ್ ಹಿರಿಯೂರು ಸಂಘದ ಗೌರವ ಅಧ್ಯಕ್ಷರಾದ ನಾಗಣ್ಣ, ಕಾರ್ಯದರ್ಶಿ ಗಿರೀಶ್, ಪದ್ಮರಾಜ್, ಓಂಕಾರ್ ಮತ್ತಿತರರು ಉಪಸ್ಥಿತರಿದ್ದರು.

                   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap